ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಇಡೀ ಭಾರತೀಯ ಸಿನಿಮಾ ರಂಗದಲ್ಲಿ ಸಖತ್ ಸೌಂಡ್ ಆಗುತ್ತಿರುವ ಸಿನಿಮಾ ವಿಕ್ರಾಂತ್ ರೋಣ. ಕಿಚ್ಚ ಸುದೀಪ್ ಸಖತ್ ಸ್ಟೈಲಿಷ್ ಜೊತೆಗೆ ಡಿಫ್ರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿರುವ ಬಹು ನಿರೀಕ್ಷಿತ ಚಿತ್ರ ಇದು.
ನಿರ್ದೇಶಕ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿರುವ ವಿಕ್ರಾಂತ್ ರೋಣ ಸಿನಿಮಾಕ್ಕೆ ನಟ ರವಿಶಂಕರ್ ಗೌಡ ಡಬ್ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ರವಿಶಂಕರ್ ಗೌಡ ಸೋಷಿಯಲ್ ಮೀಡಿಯಾದಲ್ಲಿ ಕೆಲ ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಅಬ್ಬಾ!! ಸಿನಿಮಾ ಪ್ರಾರಂಭವಾದಗಿನಿಂದ ಕೊನೆಯವರೆಗೂ ಸೀಟಿನಲ್ಲಿ ಒರಗಿಕೊಳ್ಳಲು ಸಾಧ್ಯವಿಲ್ಲ. ಕುತೂಹಲದ ಮಹಾಪೂರ, ಗೆಳೆಯ ದೀಪುವಿನ ಅಭಿನಯಕ್ಕೆ ಮನ ಸೋಲದವರಿಲ್ಲ. ಹೊಸ ಕಲಾವಿದರ ಅಚ್ಚುಕಟ್ಟಾದ ಅಭಿನಯಕ್ಕೆ ಅಭಿನಂದನೆಗಳು. ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಜಾಕ್ ಮಂಜು ಸಾರ್, ಈ ಸಿನಿಮಾ ರಿಲೀಸ್ ಆದ್ಮಲೇ ದೊಡ್ಡ ಮೈಲಿಗಲ್ಲು ಸೃಷ್ಟಿಸಲಿದೆ ಅಂತ ಭವಿಷ್ಯ ನುಡಿದಿದ್ದಾರೆ.