ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಫೋಟೊಗಳನ್ನು ದುರ್ಬಳಕೆ ಮಾಡುತ್ತಿರುವವರ ವಿರುದ್ಧ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಫೋಟೊ ದುರ್ಬಳಕೆ: ಪೊಲೀಸ್ ಠಾಣೆ ಮೆಟ್ಟಿಲೇರಿದ ಸಾಧು ಕೋಕಿಲ - ಫೋಟೋ ದುರ್ಬಳಕೆ ವಿರುದ್ಧ ಸಾಧುಕೋಕಿಲ ದೂರು
ಅನಾವಶ್ಯಕ ವಿಚಾರಗಳಿಗೆ ತನ್ನ ಫೋಟೋ ದುರ್ಬಳಕೆ ಮಾಡುತ್ತಿರುವವರ ವಿರುದ್ಧ ನಟ ಸಾಧು ಕೋಕಿಲ ಪೊಲೀಸರಿಗೆ ದೂರು ನೀಡಿದ್ದಾರೆ.
ನಟ ಸಾಧು ಕೋಕಿಲ
ಅನೇಕ ಚಲನಚಿತ್ರಗಳಲ್ಲಿ ನಟಿಸಿರುವ ಸಾಧು ಕೋಕಿಲ ಅವರ ಹಲವಾರು ಫೋಟೊಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವುಗಳನ್ನು ಫೇಸ್ಬುಕ್, ಇನ್ಸ್ಟಾಗ್ರಾಂ ಪೇಜ್ಗಳಲ್ಲಿ ಅನಾವಶ್ಯಕ ವಿಚಾರಗಳಿಗೆ ಬಳಕೆ ಮಾಡಲಾಗ್ತಿದೆ. ಇದರಿಂದ ನನ್ನ ಗೌರವಕ್ಕೆ ಧಕ್ಕೆಯಾಗ್ತಿದೆ. ಆದ್ದರಿಂದ ಫೋಟೊ ದುರ್ಬಳಕೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಧು ಕೋಕಿಲ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.
Last Updated : Sep 9, 2020, 1:00 PM IST