ಕರ್ನಾಟಕ

karnataka

ETV Bharat / sitara

ಆಸ್ಪತ್ರೆಗೆ ದಾಖಲಾದ ನಟಿ ಸಂಜನಾ ಗಲ್ರಾನಿ... ಕಾರಣ? - ಸಂಜನಾ ಗಲ್ರಾನಿ

ಮಾದಕ ವಸ್ತು ಸೇವನೆ ಮಾಡಿರುವುದು ಕೂದಲು ಪರೀಕ್ಷೆಯಿಂದ ದೃಢಪಟ್ಟಿರುವ ಬೆನ್ನಲ್ಲೇ ನಟಿ ಸಂಜನಾ ಗಲ್ರಾನಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ

By

Published : Aug 25, 2021, 10:33 PM IST

Updated : Aug 25, 2021, 10:40 PM IST

ಬೆಂಗಳೂರು:ಸ್ಯಾಂಡಲ್​ವುಡ್​​ನಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದ ಡ್ರಗ್ಸ್​ ಪ್ರಕರಣದಲ್ಲಿ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಮಾದಕ ವಸ್ತು ಸೇವನೆ ಮಾಡಿರುವುದು ಎಫ್​ಎಸ್​ಎಲ್ ಪರೀಕ್ಷೆಯಿಂದ ದೃಢಪಟ್ಟಿದೆ‌. ಈ ಹಿನ್ನೆಲೆಯಲ್ಲಿ ಇಬ್ಬರೂ ನಟಿಯರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇದರ ಬೆನ್ನಲ್ಲೇ ನಟಿ ಸಂಜನಾ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಅವರ ತಾಯಿ ರೇಷ್ಮಾ ತಿಳಿಸಿದ್ದಾರೆ.

ಸಂಜನಾ ಗಲ್ರಾನಿ ತಾಯಿ ಮಾಹಿತಿ

ಸಂಜನಾ ಸದ್ಯ ಮನೆಯಲ್ಲಿಲ್ಲ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಕೆ ಮಾನಸಿಕವಾಗಿ ಬಹಳ ನೊಂದಿದ್ದಾಳೆ. ಅದೇನೋ ಗೊತ್ತಿಲ್ಲ, ಪದೇ ಪದೆ ಈ ರೀತಿಯ ಸಮಸ್ಯೆ ಆಗುತ್ತಿದೆ. ಎಲ್ಲವನ್ನೂ ಮರೆತು ಮುಂದೆ ಹೋಗೋಣ ಅಂದರೆ ಅದು ಸಾಧ್ಯವಾಗುತ್ತಿಲ್ಲ. ಸಂಜನಾಗೆ ಶಸ್ತ್ರಚಿಕಿತ್ಸೆ ಆಗಿದೆ. ಇದೀಗ ಮಾನಸಿಕವಾಗಿ ಮತ್ತೆ ನೋವು ಅನುಭವಿಸುವಂತಾಗಿದೆ ಎಂದಿದ್ದಾರೆ.

ಬೇರೆ ಯಾವುದೇ ವಿಚಾರದ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಹುಷಾರಿಲ್ಲದ ಕಾರಣ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ನನ್ನ ಮಗಳು ಏನೂ ತಪ್ಪು ಮಾಡಿಲ್ಲ. ಆದರೆ ದುರಾದೃಷ್ಟದಿಂದ ಈ ರೀತಿಯಾಗಿ ನಡೆಯುತ್ತಿದೆ. ನಾವು ದೇವರನ್ನ ನಂಬ್ತೀವಿ. ದೇವರ ದಯೆಯಿಂದ ನಾಲ್ಕು ಜನರಿಗೆ ಸಹಾಯ ಮಾಡುತ್ತಿದ್ದೇವೆ ಅಂತಾ ಸಂಜನಾ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೊಳಗಾಗಿದ್ದ ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ರಿಲೀಸ್​ ಆಗಿದ್ದು, ಇದರ ಬೆನ್ನಲ್ಲೇ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಸ್ಯಾಂಡಲ್​​ವುಡ್ ನಟಿ ಸಂಜನಾ

ಇದನ್ನೂ ಓದಿರಿ: ಟಾಲಿವುಡ್​ ಡ್ರಗ್ಸ್​​ ಕೇಸ್​​​: ರಾಣಾ ದಗ್ಗುಬಾಟಿ, ರಾಕುಲ್‌ ಪ್ರೀತ್‌ ಸಿಂಗ್‌ ಸೇರಿ 12 ಸೆಲಿಬ್ರೆಟಿಗಳಿಗೆ ಸಮನ್ಸ್​

10 ತಿಂಗಳ ಬಳಿಕ ಹೈದರಾಬಾದ್‍ನ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಸಿಕ್ಕಿದ್ದು, ತಲೆ ಕೂದಲ ಪರೀಕ್ಷೆಯಲ್ಲಿ ನಟಿಯರ ಮಾದಕ ದ್ರವ್ಯ ಸೇವನೆ ದೃಢವಾಗಿದೆ. 2020ರ ಸೆಪ್ಟೆಂಬರ್ 13 ಕೆಸಿ ಜನರಲ್ ಆಸ್ಪತ್ರೆಯಲ್ಲಿ ರಕ್ತ, ಯೂರಿನ್ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಆದರೆ,ಡಿಸೆಂಬರ್ 5ರಂದು ಕೋರ್ಟ್ ಅನುಮತಿ ಪಡೆದು, ಕೂದಲು, ರಕ್ತ, ಯೂರಿನ್ ಅಂಶಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಈಗ ಎಫ್‍ಎಸ್‍ಎಲ್ ವರದಿಯಲ್ಲಿ ಡ್ರಗ್ಸ್ ಸೇವನೆ ಖಚಿತವಾಗಿರೋದಾಗಿ ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

Last Updated : Aug 25, 2021, 10:40 PM IST

ABOUT THE AUTHOR

...view details