ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸೆಮಿ ಲಾಕ್ಡೌನ್ ಜಾರಿ ಮಾಡಿದೆ. ಪರಿಣಾಮ ಸಾವಿರಾರು ಕೂಲಿ ಕಾರ್ಮಿಕರು, ಭಿಕ್ಷುಕರು ಸೇರಿ ಹಲವರು ಒಂದೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸಿನಿಮಾ ತಾರೆಯರಾದ ರಾಗಿಣಿ ದ್ವಿವೇದಿ, ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ, ಉಪೇಂದ್ರ ಸೇರಿದಂತೆ ಹಲವು ಸೆಲೆಬ್ರಿಟಿಗಳು ಹಸಿದವರ ಹೊಟ್ಟೆಯನ್ನು ತುಂಬಿಸುವ ಕೆಲಸ ಮಾಡುತ್ತಿದ್ದಾರೆ.
ಇದೀಗ ಲೂಸಿಯಾ ಸಿನಿಮಾ ಖ್ಯಾತಿಯ ಸತೀಶ್ ನೀನಾಸಂ, ಗೆಳೆಯರಾದ ನಿತಿನ್ ಹಾಗೂ ಪ್ರಮೋದ್ ಜೊತೆಗೂಡಿ ಗಾಂಧಿ ಬಜಾರ್ ಸುತ್ತಮುತ್ತಲಿನ ಕೂಲಿ ಕಾರ್ಮಿಕರು ಹಾಗೂ ಊಟಕ್ಕೆ ಕಷ್ಟ ಪಡುತ್ತಿರುವ ಜನರಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ.