ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ರಂಜಿಸುತ್ತಿರುವ ನಟ ಶರಣ್, ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶೂಟಿಂಗ್ ವೇಳೆ ನಟ ಶರಣ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಾದ 'ಅವತಾರ ಪುರುಷ'..! - Actor Sharan is sick
ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ, ಶರಣ್ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಶೂಟಿಂಗ್ ವೇಳೆ ನಟ ಶರಣ್ಗೆ ಅನಾರೋಗ್ಯ
ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ, ಶರಣ್ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಕೂಡಲೇ ಚಿತ್ರದ ನಿರ್ದೇಶಕ ಸುನಿ ಹಾಗೂ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಈ ವಿಷಯ ತಿಳಿದ ಶರಣ್ ಸಹೋದರಿ ಶ್ರುತಿ ಅವರು ಮಗಳು ಗೌರಿ ಜೊತೆಗೆ ಮಲ್ಲಿಗೆ ಆಸ್ಪತ್ರೆಗೆ ಆಗಮಿಸಿದ್ದಾರೆ. ಸದ್ಯ ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್ ಚಿಕಿತ್ಸೆ ಪಡೆಯುತ್ತಿದ್ದಾರೆ.