ಕರ್ನಾಟಕ

karnataka

ETV Bharat / sitara

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಶಿಲ್ಪಾ ಶೆಟ್ಟಿ - ರಾಜ್​ ಕುಂದ್ರಾ ಪ್ರಕರಣ

ಗಂಡನ ಪ್ರಕರಣದಲ್ಲಿ ಕೆಲವೊಂದು ಮಾಧ್ಯಮಗಳು ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿವೆ ಎಂದು ಆರೋಪಿಸಿರುವ ನಟಿ ಶಿಲ್ಪಾ ಶೆಟ್ಟಿ ಇದೀಗ ಕೋರ್ಟ್ ಮೆಟ್ಟಿಲೇರಿದ್ದಾರೆ.

Actor Shilpa Shetty
Actor Shilpa Shetty

By

Published : Jul 29, 2021, 8:32 PM IST

ಮುಂಬೈ(ಮಹಾರಾಷ್ಟ್ರ): ರಾಜ್​ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಇದೀಗ 29 ಮಾಧ್ಯಮ ಸಿಬ್ಬಂದಿ ಮತ್ತು ಕೆಲವೊಂದು ಮಾಧ್ಯಮ ಸಂಸ್ಥೆಗಳ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಗಂಡನ ಅಶ್ಲೀಲ ಚಿತ್ರ ಪ್ರಕರಣದಲ್ಲಿ ತಮ್ಮ ವಿರುದ್ಧ ಸುಳ್ಳು ವರದಿ ಮಾಡಲಾಗಿದ್ದು, ಜೊತೆಗೆ ಅಪಪ್ರಚಾರ ಮಾಡುವ ಕೆಲಸ ಮಾಡಿವೆ ಎಂದು ಅವರು ಬಾಂಬೆ ಹೈಕೋರ್ಟ್​​ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ.

ಪ್ರಕರಣದಲ್ಲಿ ಈಗಾಗಲೇ ಬಂಧನವಾಗಿರುವ ರಾಜ್​ ಕುಂದ್ರಾ ವಿಚಾರಣೆ ನಡೆಯುತ್ತಿದೆ. ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಪಡೆದುಕೊಳ್ಳಲಾಗಿದೆ. ಆದರೆ ಈ ಪ್ರಕರಣದಲ್ಲಿ ತಮ್ಮ ಹೆಸರು ಸಿಲುಕಿಸಿ ಕೆಲವೊಂದು ಮಾಧ್ಯಮ ಸಂಸ್ಥೆಗಳು, ಮಾಧ್ಯಮ ಪ್ರತಿನಿಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಿಲ್ಪಾ ಶೆಟ್ಟಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿಗೆ ಒಂದು ವರ್ಷ: ಹೊಸ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

ಗಂಡನ ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಂಬೈ ಪೊಲೀಸರು ಶಿಲ್ಪಾ ಶೆಟ್ಟಿ ಅವರನ್ನ ವಿಚಾರಣೆಗೊಳಪಡಿಸಿದ್ದು, ಕೆಲವೊಂದು ಮಹತ್ವದ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ABOUT THE AUTHOR

...view details