ಕರ್ನಾಟಕ

karnataka

ETV Bharat / sitara

ಸಂದೇಶ್ ಪ್ರೊಡಕ್ಷನ್ಸ್‌ನಲ್ಲಿ ಕರುನಾಡ ಚಕ್ರವರ್ತಿಯ ಹೊಸ ಸಿನಿಮಾ - ಸಂದೇಶ್ ಪ್ರೊಡಕ್ಷನ್ಸ್ ನಲ್ಲಿ ಕರುನಾಡ ಚಕ್ರವರ್ತಿಯ ಹೊಸ ಸಿನಿಮಾ

ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಕೈಯಲ್ಲಿ ಇಟ್ಟುಕೊಂಡಿರುವ ಕರುನಾಡ ಚಕ್ರವರ್ತಿ, ನಟ ಶಿವರಾಜ್‌ ಕುಮಾರ್‌ ಇದೀಗ ಇನ್ನೂ ಹೆಸರಿಡದ ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ.

actor shiva rajkumar new movie with Sandesh Production
ಸಂದೇಶ್ ಪ್ರೊಡಕ್ಷನ್ಸ್‌ನಲ್ಲಿ ಕರುನಾಡ ಚಕ್ರವರ್ತಿಯ ಹೊಸ ಸಿನಿಮಾ

By

Published : Feb 2, 2022, 4:45 PM IST

ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರ ಪಾಲಿನ ಅಚ್ಚುಮೆಚ್ಚಿನ ನಟ ಹಾಗೂ ಅಭಿಮಾನಿಗಳ ಕರುನಾಡ ಚಕ್ರವರ್ತಿ ಅಂತಾ ಕರೆಯಿಸಿಕೊಂಡಿರುವ ನಟ ಶಿವರಾಜ್ ಕುಮಾರ್ ಅವರ ಕೈಯಲ್ಲಿ ಭಜರಂಗಿ 2 ಸಿನಿಮಾ ಸಕ್ಸಸ್ ಬಳಿಕ ಬ್ಯಾಕ್ ಟು ಬ್ಯಾಕ್ ಚಿತ್ರಗಳು ಕೈಯಲ್ಲಿವೆ.

ಭೈರಾಗಿ ಸಿನಿಮಾ ಶೂಟಿಂಗ್ ಮುಗಿಸಿ ತಮ್ಮದೇ ಹೋಂ ಬ್ಯಾನರ್‌ನಲ್ಲಿ ನಿರ್ಮಾಣ ಆಗುತ್ತಿರುವ ವೇದಾ ಸಿನಿಮಾದ ಚಿತ್ರೀಕರಣದಲ್ಲಿರೋ ಶಿವರಾಜ್ ಕುಮಾರ್ ಹೆಸರಿಡದ ಮತ್ತೊಂದು ಸಿನಿಮಾವನ್ನ ಒಪ್ಪಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ನಿರ್ಮಾಪಕ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಲ್ಲಿ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ಈ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ.

ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ ಸಮರ ಹಾಗೂ ಆರ್ಯನ್ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದ ಚಿ. ಗುರುದತ್ ಇನ್ನೂ ಹೆಸರಿಡದ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ.

ವಿಭಿನ್ನ ಕಥಾಹಂದರದ ಚಿತ್ರದ ಬಗ್ಗೆ ಶಿವರಾಜ್ ಕುಮಾರ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಬಗ್ಗೆ ನಿರ್ಮಾಪಕ ಸಂದೇಶ್ ಮತ್ತು ಶಿವರಾಜ್ ಕುಮಾರ್, ನಿರ್ದೇಶಕ ಚಿ.ಗುರುದತ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಚಿಕ್ಕವಯಸ್ಸಿನಿಂದಲೂ ಸ್ನೇಹಿತರು ಆಗಿರುವ ಶಿವರಾಜ್ ಕುಮಾರ್ ಹಾಗೂ ಚಿ.ಗುರುದತ್ ಅವರು ಆರ್ಯನ್ ಸಿನಿಮಾ ಬಳಿಕ ಮತ್ತೆ ಒಂದಾಗುತ್ತಿದ್ದಾರೆ.

ಶಿವರಾಜ್ ಕುಮಾರ್ ಅಲ್ಲದೇ ಈ ಚಿತ್ರದಲ್ಲಿ ಯಾರೆಲ್ಲ ತಾರಾಬಳಗ ಹಾಗೂ ತಾಂತ್ರಿಕವರ್ಗ ಇರುತ್ತೆ, ಚಿತ್ರದ ಟೈಟಲ್ ಏನು ಅನ್ನೋದನ್ನ ಚಿತ್ರತಂಡ ಸದ್ಯದಲೇ ತಿಳಿಸಲಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ABOUT THE AUTHOR

...view details