ಕೊರೊನಾದಿಂದಾಗಿ ಕಳೆದ ಎರಡೂವರೆ ತಿಂಗಳಿನಿಂದ ಕನ್ನಡ ಚಿತ್ರರಂಗ ಸಂಪೂರ್ಣವಾಗಿ ಬಂದ್ ಆಗಿದೆ. ಸಿನಿಮಾವನ್ನೇ ನಂಬಿಕೊಂಡಿದ್ದ ಸಾವಿರಾರು ಕಾರ್ಮಿಕರು ಹಾಗೂ ಪೋಷಕ ಕಲಾವಿದರು ಕೆಲಸವಿಲ್ಲದೇ ಕಷ್ಟಪಡುತ್ತಿದ್ದಾರೆ. ಇಂತಹ ಸಮಯದಲ್ಲಿ ಉಪೇಂದ್ರ, ರಾಕಿಂಗ್ ಸ್ಟಾರ್ ಯಶ್, ಪುನೀತ್ ರಾಜ್‍ಕುಮಾರ್ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರ್ ತಮ್ಮ ಕೈಲಾದ ಸಹಾಯವನ್ನ ಮಾಡಿ ಅವರಿಗೆ ಸಹಾಯ ನೀಡಿದ್ದಾರೆ.
ಸಂಕಷ್ಟದಲ್ಲಿರುವ ಕನ್ನಡ ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ಹ್ಯಾಟ್ರಿಕ್ ಹೀರೋ - ಕನ್ನಡ ಚಿತ್ರರಂಗ
ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಶಿವಣ್ಣ 10 ಲಕ್ಷ ರೂಪಾಯಿಯ ಚೆಕ್ ತಲುಪಿಸಿದ್ದಾರೆ. ಶಿವರಾಜ್ ಕುಮಾರ್ ಆಪ್ತ ಹಾಗೂ ನಿರ್ಮಾಪಕ ಕೆಪಿ ಶ್ರೀಕಾಂತ್ ಆ ಚೆಕ್‌ನ್ನು ಸಾ ರಾ ಗೋವಿಂದು ಹಾಗೂ ಕನ್ನಡ ಸಿನಿಮಾ ಒಕ್ಕೂಟದ ಕಾರ್ಯದರ್ಶಿಗಳಾದ ರವೀಂದ್ರನಾಥ್ಗೆ ನೀಡಿದ್ದಾರೆ..
ಇದೀಗ ಸಿನಿಮಾ ಕಾರ್ಮಿಕರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನೆರವು ನೀಡಿದ್ದಾರೆ. ಪತ್ನಿ ಗೀತಾ ಅವರ ಹುಟ್ಟುಹಬ್ಬದ ಹಿನ್ನೆಲೆ ನಾಗವಾರದ ನಿವಾಸದಲ್ಲಿ ಕೇಕ್ ಕತ್ತರಿಸಿ ಗೀತಾ ಶಿವರಾಜ್ ಕುಮಾರ್ ಹುಟ್ಟು ಹಬ್ಬವನ್ನ ಆಚರಿಸಿದ್ದಾರೆ. ಬಳಿಕ ಈ ವಿಶೇಷ ಸಂದರ್ಭದಲ್ಲಿ ಚಿತ್ರರಂಗದ ಕಾರ್ಮಿಕರಿಗೆ ಸಹಾಯಹಸ್ತ ನೀಡಿದ್ದಾರೆ.
ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಶಿವಣ್ಣ 10 ಲಕ್ಷ ರೂಪಾಯಿಯ ಚೆಕ್ ತಲುಪಿಸಿದ್ದಾರೆ. ಶಿವರಾಜ್ ಕುಮಾರ್ ಆಪ್ತ ಹಾಗೂ ನಿರ್ಮಾಪಕ ಕೆಪಿ ಶ್ರೀಕಾಂತ್ ಆ ಚೆಕ್‌ನ್ನು ಸಾ ರಾ ಗೋವಿಂದು ಹಾಗೂ ಕನ್ನಡ ಸಿನಿಮಾ ಒಕ್ಕೂಟದ ಕಾರ್ಯದರ್ಶಿಗಳಾದ ರವೀಂದ್ರನಾಥ್ಗೆ ನೀಡಿದ್ದಾರೆ.