ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 58ನೇ ವಸಂತಕ್ಕೆ ಕಾಲಿಟ್ಟಿರುವ ಶಿವಣ್ಣ ಕುಟುಂಬದವರ ಜೊತೆ ಕೇಕ್ ಕತ್ತರಿಸಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಕರುನಾಡ ಚಕ್ರವರ್ತಿಯ ಹುಟ್ಟುಹಬ್ಬ... ಕುಟುಂಬದವರ ಜತೆ ಸೇರಿ ಕೇಕ್ ಕತ್ತರಿಸಿದ ಹ್ಯಾಟ್ರಿಕ್ ಹೀರೋ! - ಕರುನಾಡ ಚಕ್ರವರ್ತಿಯ ಹುಟ್ಟುಹಬ್ಬ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 58ನೇ ವಸಂತಕ್ಕೆ ಕಾಲಿರಿಸಿರುವ ನಟ ಈಗಲೂ ಚಿರಯುವಕನಂತೆ ಮಿಂಚುತ್ತಿದ್ದಾರೆ.
ಪ್ರತಿವರ್ಷ ಶಿವಣ್ಣನ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಣೆ ಮಾಡುತ್ತಿದ್ದರು. ಆದರೆ ಕಳೆದೆರಡು ವರ್ಷಗಳಿಂದ ಶಿವಣ್ಣ ಅಭಿಮಾನಿಗಳಿಗೆ ಹುಟ್ಟುಹಬ್ಬ ಆಚರಿಸುವ ಅವಕಾಶ ಸಿಕ್ಕಿಲ್ಲ. ಹೋದ ವರ್ಷ ಶಿವಣ್ಣ ಭುಜದ ಶಸ್ತ್ರ ಚಿಕಿತ್ಸೆಗಾಗಿ ಇಂಗ್ಲೆಂಡಿಗೆ ತೆರಳಿದರು. ಆದರೆ ಈ ವರ್ಷ ಮಹಾಮಾರಿ ಕೊರೊನಾ ವೈರಸ್ ಭೀತಿ ಇರುವ ಕಾರಣ ಶಿವಣ್ಣ ಅಭಿಮಾನಿಗಳ ಆರೋಗ್ಯದ ದೃಷ್ಟಿಯಿಂದ ಹುಟ್ಟುಹಬ್ಬವನ್ನು ಅವರೊಂದಿಗೆ ಆಚರಿಸಿಕೊಳ್ಳುತ್ತಿಲ್ಲ.
ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಟ್ಟ ಶಿವಣ್ಣ
ಆದರೆ ಸೆಂಚುರಿ ಸ್ಟಾರ್ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿಲ್ಲ. ಬಹು ನಿರೀಕ್ಷಿತ ಚಿತ್ರ ಭಜರಂಗಿ 2 ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಭರ್ಜರಿ ಗಿಫ್ಟ್ ಕೊಡಲಿದ್ದಾರೆ. ಶಿವಣ್ಣ ಹುಟ್ಟುಹಬ್ಬದ ಅಂಗವಾಗಿ 'ಭಜರಂಗಿ 2' ಚಿತ್ರದ ಅಧಿಕೃತ ಟೀಸರ್ ಬೆಳಿಗ್ಗೆ 11.30ಕ್ಕೆ ಬಿಡುಗಡೆಯಾಗಲಿದೆ.