ಕರ್ನಾಟಕ

karnataka

ETV Bharat / sitara

ಬಿಗ್​​​ಬಾಸ್ ಖ್ಯಾತಿ ರಾಜೀವ್ ಅಭಿನಯದ 'ಉಸಿರೇ ಉಸಿರೇ' ಚಿತ್ರಕ್ಕೆ ಹೆಬ್ಬುಲಿ ಸಾಥ್ - ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ

ಇದು ನನ್ನ‌ ಅಕ್ಷರಗಳು ಅನ್ನವಾಗುತ್ತಿರುವ ಸಮಯ. ಇದೊಂದು ಪಕ್ಕಾ ಪ್ರೇಮಕಥೆ.‌ ಈವರೆಗೂ ಅನೇಕ ಪ್ರೇಮಕಥೆಯುಳ್ಳ ಚಿತ್ರಗಳು ಬಂದಿವೆಯಾದರೂ ಇದು ವಿಭಿನ್ನ. ಅಮರಪ್ರೇಮಿಗಳು ಎಂದರೆ ಎಲ್ಲರೂ ರೋಮಿಯೋ-ಜೂಲಿಯಟ್, ಸಲೀಂ-ಅನಾರ್ಕಲಿ ಅನ್ನುತ್ತಾರೆ. ಈ ಚಿತ್ರ ನೋಡಿದ ಮೇಲೆ ಪ್ರೇಕ್ಷಕರು ನಮ್ಮ ಕಥಾನಾಯಕ-ನಾಯಕಿಯನ್ನು ಈ ಸಾಲಿಗೆ‌ ಸೇರಿಸಬಹುದು..

usire usire movie team
ಉಸಿರೇ ಉಸಿರೇ ಚಿತ್ರತಂಡ

By

Published : Aug 21, 2021, 4:36 PM IST

ಸಿಸಿಎಲ್ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಹೊಂದಿರುವ ನಟ ರಾಜೀವ್. ಈ ಬಾರಿಯ ಬಿಗ್ ಬಾಸ್​​​ನಲ್ಲಿ ಭಾಗವಹಿಸಿ ಜನರ ಮನ ಗೆದ್ದವರು. ಇದೀಗ ರಾಜೀವ್​​ ಉಸಿರೇ ಉಸಿರೇ ಚಿತ್ರದ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ‘ಉಸಿರೇ ಉಸಿರೇ’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಇದಕ್ಕೆ ನಟ ಸುದೀಪ್​ ಅವರು ವಿಶೇಷ ಅತಿಥಿಯಾಗಿ ಆಗಮಿಸಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದರು.

ಉಸಿರೇ ಉಸಿರೇ ಚಿತ್ರತಂಡ

ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ರಾಜೀವ್​. ಅವನಲ್ಲಿ ಈಗಲೂ ಮುಗ್ಧತೆ ಇದೆ. ಎಲ್ಲವನ್ನೂ ಬೇಗ ನಂಬಿ ಬಿಡುತ್ತಾನೆ. ಪುಣ್ಯ, ಅವನ ಪಕ್ಕದಲ್ಲಿರುವ ಹೆಂಡತಿ ಜಾಣೆ. ಆ ಹುಡುಗಿ ಇವನಿಗೆ ಎಲ್ಲವನ್ನೂ ಹೇಳಿ ಕೊಡುತ್ತಿದ್ದಾರೆ.

ಸಿಸಿಎಲ್ ದಿನಗಳಿಂದಲೂ ನನಗೆ ಈತ ಪರಿಚಯ. ಅವನು ಕ್ರಿಕೆಟ್ ಸರಿಯಾಗಿ ಅಭ್ಯಾಸ ಮಾಡಿದ್ದರೆ, ಇಷ್ಟೊತ್ತಿಗೆ ರಾಜ್ಯ ಮಟ್ಟದಲ್ಲಿ ಆಡುತ್ತಿದ್ದ. ಈ ಸಿನಿಮಾದಿಂದ ರಾಜೀವ್​ಗೆ ಒಳ್ಳೆದಾಗಲಿ ಎಂದು ಸುದೀಪ್​ ಶುಭ ಹಾರೈಸಿದರು.

ಕೋವಿಡ್​ ಕಾರಣದಿಂದ ಯಾರೂ ಸಿನಿಮಾ ನಿರ್ಮಾಣ ಮಾಡಲು ಮುಂದೆ ಬರುತ್ತಿಲ್ಲ. ಆದರೆ, ಇಂಥ ಸಮಯದಲ್ಲಿ ಪ್ರದೀಪ್​ ಅವರು ಸಿನಿಮಾ ನಿರ್ಮಿಸುತ್ತಿರುವುದು ತುಂಬಾ ಸಂತೋಷವಾಗಿದೆ.

ಒಳ್ಳೆಯವರೆಲ್ಲಾ ಸೇರಿ ಮಾಡುವ ಕೆಲಸ ಒಳ್ಳೇಯದೆ ಆಗಿರುತ್ತದೆ ಎಂದು ಹಾರೈಸಿದ ಸುದೀಪ್, ತಮಗೆ ಚಿತ್ರತಂಡ ಉಡುಗೊರೆಯಾಗಿ ನೀಡಿದ ಬೆಳ್ಳಿ ಪೆನ್ನನ್ನು ನಿರ್ದೇಶಕರಿಗೆ ನೀಡಿ ನಿಮ್ಮ ಮಾತುಗಳು ತುಂಬಾ ಚೆನ್ನಾಗಿತ್ತು. ನಿಮ್ಮ ಮುಂದಿನ ಕೆಲಸಗಳೆಲ್ಲ ಸುಲಲಿತವಾಗಿ ನಡೆಯಲಿ ಎಂದು ಹಾರೈಸಿದರು.

ಉಸಿರೇ ಉಸಿರೇ ಚಿತ್ರತಂಡ

ನಾನು ಸುದೀಪ್ ಸರ್ ಜೊತೆ ಕಾರಿನಲ್ಲಿ ಬರುತ್ತಿದ್ದಾಗ ಅವರ ನಟನೆಯ ಚಿತ್ರದ ಉಸಿರೇ ಉಸಿರೇ ಹಾಡು ಕೇಳಿದ್ದೆ. ನನಗೆ ಈ ಚಿತ್ರದ ಗೊತ್ತಿದ್ದರಿಂದ ನಿರ್ದೇಶಕರಿಗೆ ಫೋನ್ ಮಾಡಿ ನಮ್ಮ ಚಿತ್ರಕ್ಕೆ ಇದೇ ಶೀರ್ಷಿಕೆ ಇಡೋಣ. ಈಗಲೇ ನೊಂದಾಯಿಸಿ ಎಂದು ಹೇಳಿದೆ.

ಚಿತ್ರಕ್ಕಾಗಿ ನಾನು ಹೆಚ್ಚು ವರ್ಕ್​​ಔಟ್ ಏನು ಮಾಡಿಲ್ಲ. ಸಹಜವಾಗಿರುವ ಪಾತ್ರ. ನಮ್ಮ ನಾಲ್ಕುವರ್ಷಗಳ ಶ್ರಮಕ್ಕೆ ಈಗ ಉತ್ತಮ ಕಾಲ ಕೂಡಿ ಬಂದಿದೆ.‌ ಎಲ್ಲರ ಹಾರೈಕೆಯು ನಮಗಿರಲಿ ಎಂದು ರಾಜೀವ್​ ಕೋರಿದರು.

ರಾಜೀವ್ ಮತ್ತು ಶ್ರೀಜಿತ ಘೋಷ್

ಇದು ನನ್ನ‌ ಅಕ್ಷರಗಳು ಅನ್ನವಾಗುತ್ತಿರುವ ಸಮಯ. ಇದೊಂದು ಪಕ್ಕಾ ಪ್ರೇಮಕಥೆ.‌ ಈವರೆಗೂ ಅನೇಕ ಪ್ರೇಮಕಥೆಯುಳ್ಳ ಚಿತ್ರಗಳು ಬಂದಿವೆಯಾದರೂ ಇದು ವಿಭಿನ್ನ. ಅಮರಪ್ರೇಮಿಗಳು ಎಂದರೆ ಎಲ್ಲರೂ ರೋಮಿಯೋ-ಜೂಲಿಯಟ್, ಸಲೀಂ-ಅನಾರ್ಕಲಿ ಅನ್ನುತ್ತಾರೆ. ಈ ಚಿತ್ರ ನೋಡಿದ ಮೇಲೆ ಪ್ರೇಕ್ಷಕರು ನಮ್ಮ ಕಥಾನಾಯಕ-ನಾಯಕಿಯನ್ನು ಈ ಸಾಲಿಗೆ‌ ಸೇರಿಸಬಹುದು ಎಂದ ನಿರ್ದೇಶಕ ಸಿ ಎಂ ವಿಜಯ್ ಹೇಳಿದರು.

ಎನ್ ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರದೀಪ್ ಯಾದವ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಜೀವ್​ಗೆ ನಾಯಕಿಯಾಗಿ ಶ್ರೀಜಿತ ಘೋಷ್ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ತೆಲುಗಿನ ಖ್ಯಾತ ನಟ ಅಲಿ ಸಹ ನಟಿಸುತ್ತಿದ್ದಾರೆ. ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ನೀಡಿದ್ದು, ಸರವಣನ್ ಛಾಯಾಗ್ರಹಣ ಮಾಡುತ್ತಿದ್ದಾರೆ.

ಓದಿ: ಖ್ಯಾತ ಬಹುಭಾಷಾ ನಟಿ ಚಿತ್ರಾ ನಿಧನ.. ಚಿತ್ರರಂಗದ ಗಣ್ಯರ ಸಂತಾಪ

ABOUT THE AUTHOR

...view details