ಕರ್ನಾಟಕ

karnataka

ETV Bharat / sitara

ಗಾಯಕ ಆಂಥೋನಿ ದಾಸ್ ಹಾಡಿಗೆ‌ ಲೂಸ್ ಮಾದನ ಬೊಂಬಾಟ್ ಸ್ಟೆಪ್.. - actor yogi dance

ಗಾಯಕ ಆಂಥೋನಿ ದಾಸ್ ಹಾಡಿರುವ, ನೋಡು ನೋಡು ಯೋಗಿ ಬಾಸು ಮಾಸು ಎಂಟ್ರಿ ಕೊಟ್ಟೇಬಿಟ್ಟ, ಧೂಳಿನಿಂದ ಎದ್ದು ಬಂದು ಅಂಬಾರಿ ಏರೇ ಬಿಟ್ಟ ಹಾಡಿನ ಮೇಕಿಂಗ್ ಆನಂದ್ ಆಡಿಯೋ ಮೂಲಕ ಬಿಡುಗಡೆ ಆಗಿದೆ.

yogi
yogi

By

Published : Jul 21, 2021, 5:04 PM IST

ಲೂಸ್ ಮಾದ ಯೋಗಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಚಾರ್ಮ್ ಹೊಂದಿರುವ ನಟ. ಸದ್ಯ ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನ‌ ಮಾಡ್ತಾ ಇದ್ದಾರೆ. ಇದೀಗ ಲಂಕೆ ಸಿನಿಮಾದಲ್ಲಿ ಲೂಸ್ ಮಾದ ಯೋಗಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟಗರು ಸಿನಿಮಾ ಖ್ಯಾತಿಯ ಗಾಯಕ ಆಂಥೋನಿ ದಾಸ್ ಹಾಡಿರುವ, ನೋಡು ನೋಡು ಯೋಗಿ ಬಾಸು ಮಾಸು ಎಂಟ್ರಿ ಕೊಟ್ಟೇಬಿಟ್ಟ, ಧೂಳಿನಿಂದ ಎದ್ದು ಬಂದು ಅಂಬಾರಿ ಏರೇ ಬಿಟ್ಟ ಹಾಡಿನ ಮೇಕಿಂಗ್ ಆನಂದ್ ಆಡಿಯೋ ಮೂಲಕ ಬಿಡುಗಡೆ ಆಗಿದೆ.

ಈ ಹಾಡಿನಲ್ಲಿ ಲೂಸ್ ಮಾದ ಯೋಗಿ ಬೊಂಬಾಟ್ ಸ್ಟೆಪ್ ಹಾಕಿದ್ದಾರೆ. ಈ ಹಾಡಿಗೆ ನಿರ್ದೇಶಕ ರಾಮ ಪ್ರಸಾದ್ ಎಂ.ಡಿ. ಸಾಹಿತ್ಯ ಬರೆದಿದ್ದು, ಸಂಗೀತ ನಿರ್ದೇಶಕ ಕಾರ್ತಿಕ್ ಶರ್ಮಾ ಸಂಗೀತ ನೀಡಿದ್ದಾರೆ. ಸಾಹಸ ಪ್ರಧಾನವಾದ ಈ ಚಿತ್ರವನ್ನು ರಾಮ್ ಪ್ರಸಾದ್ ಎಂ.ಡಿ. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರಾಮಪ್ರಾಸಾದ್ ಹಾಗೂ ಗುರುರಾಜ ದೇಸಾಯಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

ಲೂಸ್ ಮಾದ ಯೋಗೇಶ್ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ಇತ್ತೀಚೆಗೆ ನಿಧನರಾದ ಸಂಚಾರಿ ವಿಜಯ್ ಸಹ ಈ‌ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೃಷಿ ತಾಪಂಡ, ಕಾವ್ಯ ಶೆಟ್ಟಿ, ಶರತ್ ಲೋಹಿತಾಶ್ವ, ಶೋಭ್ ರಾಜ್, ಡ್ಯಾನಿ ಕುಟ್ಟಪ್ಪ, ಸುಚೇಂದ್ರ ಪ್ರಸಾದ್, ವಾಣಿಶ್ರೀ, ಗಾಯಿತ್ರಿ ಜಯರಾಂ, ಎಸ್ಟರ್ ನರೋನ, ಪ್ರಶಾಂತ್ ಸಿದ್ದಿ, ಆದ್ಯ ನಾಯಕ್ ಹೀಗೆ ದೊಡ್ಡ ತಾರ ಬಳಗ ಚಿತ್ರದಲ್ಲಿದ್ದಾರೆ.

ರಮೇಶ್ ಬಾಬು ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನ, ರವಿವರ್ಮ, ಪಳನಿರಾಜ್, ಅಶೋಕ್ ಸಾಹಸ ನಿರ್ದೇಶನ ಹಾಗೂ ಧನಂಜಯ್, ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ದಿ ಗ್ರೇಟ್ ಎಂಟರ್​ಟೈನರ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್ (ನಾಗವಾರ) ಹಾಗೂ ಸುರೇಖ ರಾಮಪ್ರಸಾದ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಲಂಕೆ ಸಿನಿಮಾ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲು ಸಜ್ಜಾಗಿದೆ‌.

ABOUT THE AUTHOR

...view details