ರಾಮನಗರ/ಬೆಂಗಳೂರು:ಡೆತ್ನೋಟ್ ಬರೆದಿಟ್ಟು ನಟಿ ಸೌಜನ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಜನ್ಯ ಇಂಗ್ಲಿಷ್ನಲ್ಲಿ ಬರೆದಿರುವ 4 ಪುಟದ ಡೆತ್ನೋಟ್ ಪತ್ತೆಯಾಗಿದೆ. 'ಅಪ್ಪ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನಾನು ಸಾವಿನ ಮನೆಗೆ ಹೋಗುತ್ತಿದ್ದೇನೆ'. ಕ್ಷಮಿಸಿ ಎಂದಿರುವ ಅವರು, ಸ್ನೇಹಿತರು ಮತ್ತು ಸಹೋದರರ ಹೆಸರನ್ನೂ ಬರೆದಿದ್ದಾರೆ ಎಂದು ತಿಳಿದುಬಂದಿದೆ.