ಪೊಗರು ಚಿತ್ರದ ಶೂಟಿಂಗ್ ಮುಗಿಸಿಕೊಂಡು ಬಳ್ಳಾರಿಯಿಂದ ವಾಪಸ್ ಆಗುತ್ತಿದ್ದ ವೇಳೆ ನಟ ಧ್ರುವ ಸರ್ಜಾ ಕಾರು ಅಪಘಾತವಾಗಿದೆ.
ಪೊಗರು ನಾಯಕನ ಕಾರಿಗೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಧ್ರುವ...! - ಪೊಗರು ನಾಯಕ ಧ್ರುವ ಸರ್ಜಾ
ಶೂಟಿಂಗ್ ಮುಗಿಸಿ ಬಳ್ಳಾರಿಯಿಂದ ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಮಾರ್ಗ ಮಧ್ಯೆ ಧ್ರುವ ಸರ್ಜಾ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗ್ತಿದ್ದು, ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎನ್ನಲಾಗಿದೆ.
ಪೊಗರು ನಾಯಕನ ಕಾರಿಗೆ ಅಪಘಾತ
ಬಳ್ಳಾರಿಯಿಂದ ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಮಾರ್ಗ ಮಧ್ಯೆ ಧ್ರುವ ಸರ್ಜಾ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗ್ತಿದ್ದು, ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎನ್ನಲಾಗಿದೆ.
ಇನ್ನು ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೊಗರು ಸಿನಿಮಾವನ್ನು ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದು, ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಶಾನ್ವಿ ಶ್ರೀವಾತ್ಸವ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.