ಕರ್ನಾಟಕ

karnataka

ETV Bharat / sitara

ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ... ದ್ವಿವೇದಿಗೆ ಜೈಲೇ ಗತಿ! - ಸ್ಯಾಂಡಲ್​ವುಡ್​ಗೆ ಡ್ರಗ್ ಜಾಲದ ನಂಟು ಆರೋಪ ಪ್ರಕರಣ

ಸ್ಯಾಂಡಲ್​ವುಡ್​ಗೆ ಡ್ರಗ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಮತ್ತೆ ಮುಂದೂಡಿಕೆ ಮಾಡಿದೆ.

Actress Ragini Dwivedi bail plea to be heard in Supreme Court
ಸುಪ್ರೀಂಕೋರ್ಟ್‌ನಲ್ಲಿ ಇಂದು ನಟಿ ರಾಗಿಣಿ ದ್ವಿವೇದಿಯ ಜಾಮೀನು ಅರ್ಜಿ ವಿಚಾರಣೆ

By

Published : Jan 19, 2021, 10:01 AM IST

Updated : Jan 19, 2021, 11:47 AM IST

ನವದೆಹಲಿ:ಸ್ಯಾಂಡಲ್​ವುಡ್​ಗೆ ಡ್ರಗ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ಇಂದು ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್​ ಜನವರಿ 21 ಕ್ಕೆ ಮುಂದೂಡಿಕೆ ಮಾಡಿದೆ.

ಸ್ಯಾಂಡಲ್​ವುಡ್​ಗೆ ಡ್ರಗ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಇಂದು ನಟಿ ಪರ ವಕೀಲರು ಸಲ್ಲಿಸಿದ್ದ ಅರ್ಜಿ ಕೈಗೆತ್ತಿಕೊಂಡ ಕೋರ್ಟ್​ ವಿಚಾರಣೆ ಮುಂದೂಡಿಕೆ ಮಾಡಿತು. ಕಳೆದ ನವೆಂಬರ್ 3 ರಂದು ನಟಿ ರಾಗಿಣಿ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಹಾಗಾಗಿ ರಾಗಿಣಿ ಬೇಲ್​ಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

Last Updated : Jan 19, 2021, 11:47 AM IST

For All Latest Updates

TAGGED:

ABOUT THE AUTHOR

...view details