ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಸಂಘರ್ಷ ಭುಗಿಲೆದ್ದಿದೆ. ಪರ-ವಿರೋಧಗಳು ಕೇಳಿ ಬರುತ್ತಿವೆ. ಈ ಕುರಿತಂತೆ ಸ್ಯಾಂಡಲ್ವುಡ್ ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರರಂಗ ಹಾಗೂ ರಾಜಕೀಯದಿಂದ ದೂರು ಉಳದಿರುವ ಮೋಹಕ ತಾರೆ ರಮ್ಯಾ, ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಾರೆ. ಆಗಾಗ ಸಮಾಜದ ಅಂಕುಡೊಂಕುಗಳ ಬಗ್ಗೆ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತುತ್ತಿರುತ್ತಾರೆ.
ಕರ್ನಾಟಕದಲ್ಲಿ ಉಂಟಾಗಿರುವ ಹಿಜಾಬ್ ಸಂಘರ್ಷ ಕುರಿತಂತೆ ಪ್ರತಿಕ್ರಿಯಿಸಿದ್ದು, ಭಾರತದ ಯುವಕರು ವಿಭಜನೆ ಆಗ್ತಾ ಇರೋದು ನೋಡುತ್ತಿದ್ದರೆ ತುಂಬಾ ಬೇಸರವಾಗುತ್ತದೆ ಎಂದು ರಮ್ಯಾ ಟ್ಟಿಟರ್ನಲ್ಲಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.