ಉತ್ತರದಿಂದ ದಕ್ಷಿಣದವರೆಗೆ ಅಭಿಮಾನಿಗಳ ಬಳಗವನ್ನು ಕಟ್ಟಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಅವರ ನಾಗಾಲೋಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಚಿತ್ರರಂಗಕ್ಕೆ ಕಾಲಿಟ್ಟು 5 ವರ್ಷ ಕೂಡ ಪೂರ್ಣಗೊಂಡಿಲ್ಲ. ಅದಾಗಲೇ ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 2 ಕೋಟಿ ಜನ ಫಾಲೋವರ್ಸ್ ಹೊಂದಿರುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ನಟಿ ಎಂಬ ಅಳಿಸಲಾರದ ಖ್ಯಾತಿಯನ್ನು ತನ್ನದಾಗಿಸಿಕೊಂಡಿದ್ದಾಳೆ.
ಈ ಪ್ರಾಮಾಣದ ತೆರೆದ ಹೃದಯಗಳ ಪ್ರೀತಿಗೆ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಉಡುಗೊರೆಯೊಂದನ್ನು ನೀಡಿದ್ದಾರೆ. ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದ ಬಳಿಕ ಶರವೇಗದಲ್ಲಿಯೇ ಬೆಳೆದು ನಿಂತ ರಶ್ಮಿಕಾ, ಈಗ ದೇಶದ ಉದ್ದಗಲಕ್ಕೂ ಅಭಿಮಾನಿಗಳನ್ನು ಹೊಂದಿದ್ದಾಳೆ. ನಟಿಯ ಕೀರ್ತಿ ಇಷ್ಟಕ್ಕೆ ನಿಂತಿಲ್ಲ.