ದೊಡ್ಡಬಳ್ಳಾಪುರ: ನಟಿ ಶ್ವೇತಾ ಶ್ರೀವಾತ್ಸವ್ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಮಂಗಳವಾರದಂದು ಕ್ಷೇತ್ರಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ಶ್ವೇತಾ ಶ್ರೀವಾತ್ಸವ್
ಪತಿ, ಮಗಳು ಮತ್ತು ಅತ್ತೆ ಮಾವನ ಜೊತೆ ನಟಿ ಶ್ವೇತಾ ಶ್ರೀವಾತ್ಸವ್ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ನಟಿ ಶ್ವೇತಾ ಶ್ರೀವಾತ್ಸವ್
ಪತಿ, ಮಗಳು ಮತ್ತು ಅತ್ತೆ ಮಾವನ ಜೊತೆ ಕ್ಷೇತ್ರಕ್ಕೆ ಆಗಮಿಸಿದ ನಟಿ ಶ್ವೇತಾ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸಿಂಪಲ್ಲಾಗಿ ಒಂದು ಲವ್ ಸ್ಟೋರಿ ಸಿನಿಮಾದ ಮೂಲಕ ನಟನಾ ಲೋಕದಲ್ಲಿ ಪ್ರಸಿದ್ಧಿ ಪಡೆದ ಶ್ವೇತಾ ಶ್ರೀವಾತ್ಸವ್ ಕಿರುತೆರೆ, ರಂಗಭೂಮಿಯಲ್ಲಿ ತನ್ನ ಛಾಪು ಮೂಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು, ತಮ್ಮ ಮಗಳ ಜೊತೆಗೆ ಇರುವ ವಿಡಿಯೋಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳ ಗಮನ ಸೆಳೆಯುತ್ತಾರೆ.