ಕರ್ನಾಟಕ

karnataka

ETV Bharat / sitara

ತಿರುಪತಿ ತಿಮ್ಮಪ್ಪನ ಮೊರೆ ಹೋದ ಸುಮಲತಾ ! ಆಶೀರ್ವದಿಸುವನೇ ವೆಂಕಟೇಶ...!! - ವೆಂಕಟೇಶ

ಮಂಡ್ಯ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಘೋಷಣೆ ಬಳಿಕ ನಟಿ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಜೊತೆ ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ.

ತಿರುಪತಿ ತಿಮ್ಮಪ್ಪನ ಮೊರೆ ಹೋದ ಸುಮಲತಾ

By

Published : Mar 19, 2019, 3:45 PM IST

ಮಧ್ಯಾಹ್ನ ನಗರದ ಖಾಸಗಿ ಹೋಟೆಲ್​​​ನಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಮಲತಾ ನಂತರ ಕೆಲಕಾಲ ವಿಶ್ರಾಂತಿ ಪಡೆದು ತಿರುಪತಿಗೆ ತೆರಳಿದರು. ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಾರ್ಚ್ 20 ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಮಾಡಲು ನಿರ್ಧರಿಸಿದ್ದು, ಅದಕ್ಕೂ ಮುನ್ನಾದಿನ ತಿಮ್ಮಪ್ಪನ ಮೊರೆ ಹೋಗಿದ್ದಾರೆ.

ABOUT THE AUTHOR

...view details