ಕರ್ನಾಟಕ

karnataka

ETV Bharat / sitara

ಅದಿತಿ ಪ್ರಭುದೇವ ನಟನೆಯ 'ಆನ' ಬಿಡುಗಡೆಗೆ ಮುಹೂರ್ತ ಫಿಕ್ಸ್ - Aana movie release date fix

ಅದಿತಿ ಪ್ರಭುದೇವ ನಟನೆಯ ಆನ ಸಿನಿಮಾ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಚಿತ್ರ ತಂಡ ಸದ್ಯ ಚಿತ್ರ ರಿಲೀಸ್ ಮಾಡಲು ಸಿದ್ಧವಾಗಿದೆ.

Aana movie team
ಆನ ಚಿತ್ರ ತಂಡ

By

Published : Dec 13, 2021, 4:59 PM IST

'ಆನ' ಎಂಬ ಕ್ಯಾಚಿ ಟೈಟಲ್​​ನಿಂದಲೇ, ಕುತೂಹಲ ಹುಟ್ಟಿಸಿರುವ ಆನ ಸಿನಿಮಾದ ಬಿಡುಗಡೆ ದಿನಾಂಕವನ್ನ ಚಿತ್ರ ತಂಡ ಅನೌನ್ಸ್ ಮಾಡಿದೆ. ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಚಿತ್ರ ಎಂದು ಬಿಂಬಿಸಲಾಗಿರುವ ಆನ‌ ಚಿತ್ರ ಡಿ.17 ರಂದು ಬಿಡುಗಡೆಯಾಗುತ್ತಿದೆ.

ಆನ ಚಿತ್ರ ತಂಡ

ಕಳೆದ ವಾರ ಬಿಡುಗಡೆಯಾಗಿರುವ ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಮೊದಲ ಬಾರಿಗೆ ಪ್ರಭುದೇವ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುನೀಲ್ ಪುರಾಣಿಕ್ ಅವರ ಪಾತ್ರ ಸಹ ಎಲ್ಲರ ನೆನಪಿನಲ್ಲಿ ಉಳಿಯುತ್ತದೆ.‌

ಚಿತ್ರ ಉತ್ತಮವಾಗಿ ಮೂಡಿ ಬಂದಿದೆಯಾದರೂ ತೆಲುಗಿನ ದೊಡ್ಡ ಚಿತ್ರವೊಂದು ಬಿಡುಗಡೆ ಆಗುತ್ತಿರುವ ಕಾರಣ ನನ್ನ ಊರಾದ ದಾವಣಗೆರೆಯಲ್ಲೇ ನಮ್ಮ ಚಿತ್ರಕ್ಕೆ ಚಿತ್ರಮಂದಿರ ಸಿಗುತ್ತಿಲ್ಲ ಎಂದು ನಿರ್ದೇಶಕ ಮನೋಜ್ ಪಿ ನಡಲುಮನೆ ಬೇಸರ ವ್ಯಕ್ತಪಡಿಸಿದರು.

ಆನ ಚಿತ್ರ ತಂಡ

ನಾನು ಈವರೆಗೂ ಈ ರೀತಿಯ ಪಾತ್ರ ಮಾಡಿಲ್ಲ. ನನಗೂ ಚಿತ್ರ ಒಪ್ಪಿಕೊಂಡಾಗ ಸ್ವಲ್ಪ ಭಯವಿತ್ತು. ಹೇಗೆ ಕಾಣುತ್ತೇನೋ ಎಂದು. ಈಗ ಆ ಭಯ ಹೋಗಿದೆ. ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಇದೆ. ಅದಕ್ಕೆ ನಿಮ್ಮ ಬೆಂಬಲ ಬೇಕಾಗಿದೆ ಎಂದು ನಾಯಕಿ ಅದಿತಿ ಪ್ರಭುದೇವ ಮನವಿ ಮಾಡಿದ್ದಾರೆ.

ಸುನೀಲ್ ಪುರಾಣಿಕ್, ಚೇತನ್ ಗಂಧರ್ವ, ರನ್ವಿತ್ ಶಿವಕುಮಾರ್, ವಿಕಾಶ್ ಉತ್ತಯ್ಯ, ಪ್ರೇರಣ ಕಂಬಂಮ್, ವರುಣ್ , ಸಮರ್ಥ್ ನರಸಿಂಹರಾಜು, ಕಾರ್ತಿಕ್ ನಾಗಾರಾಜನ್, ಶಿವಮಂಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಯು.ಕೆ.ಪ್ರೊಡಕ್ಷನ್ಸ್ ಲಾಂಛನದಲ್ಲಿ, ಶ್ರೀಮತಿ ಪೂಜಾ ವಸಂತ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿಧರ ಅವರ ಸಂಗೀತ ನಿರ್ದೇಶನವಿರುವ ಆನಗೆ ವಿಜೇತ್ ಚಂದ್ರ ಅವರ ಸಂಕಲನವಿದೆ.

ಇದನ್ನೂ ಓದಿ:ದಕ್ಷಿಣದಲ್ಲಿ ಅದಿತಿ ಪ್ರಭುದೇವ ನಟನೆಯ 'ಆನ' ಚಿತ್ರಕ್ಕೆ ಫುಲ್​ ಡಿಮ್ಯಾಂಡ್!

ABOUT THE AUTHOR

...view details