ಕೊರೊನಾ ಭೀತಿ ಕನ್ನಡ ಚಿತ್ರೋದ್ಯಮಕ್ಕೆ ಭಾರಿ ಹೊಡೆತ ಕೊಟ್ಟಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್ ಹೇಳಿದರು.
ಕೊರೊನಾ ಭೀತಿ: ಸಿನಿಮಾ ನಿರ್ಮಾಪಕರಿಗೆ CBFC ಕೊಟ್ಟ ಸಲಹೆ ಏನು? - ಫಿಲ್ಮ್ ಚೇಂಬರ್ ಸುದ್ದಿಗೋಷ್ಠಿ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈಗಗಲೇ ಪ್ರದರ್ಶನ ಕಾಣುತ್ತಿದ್ದ ಸಿನಿಮಾಗಳಿಗೆ ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆದ ನಂತ್ರ ಮೊದಲ ಆದ್ಯತೆ ನೀಡಬೇಕು ಎಂದು CBFC ತಿಳಿಸಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ CBFC(Central Board of Film Certification ) ನೀಡಿರುವ ಕೆಲವು ಸಲಹೆಗಳನ್ನು ತಿಳಿಸಿದ್ರು. ಕಳೆದ 22ನೇ ತಾರೀಖಿನಿಂದ ಈ ತಿಂಗಳು 31ರವರೆಗೆ ಚಿತ್ರಮಂದಿರಗಳು, ಸಿನಿಮಾ ಶೂಟಿಂಗ್ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈಗಗಲೇ ಪ್ರದರ್ಶನ ಕಾಣುತ್ತಿದ್ದ ಸಿನಿಮಾಗಳಿಗೆ ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆದ ನಂತ್ರ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಇನ್ನು ಯಾವುದಾದರು ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಇನ್ನೆರಡು ಮೂರು ದಿನಗಳಲ್ಲಿ ಚಿತ್ರೀಕರಣ ಮುಗಿಯುವ ಹಂತದಲ್ಲಿದ್ದರೆ ಆ ವೇಳೆ ಮಾಸ್ಕ್, ಸ್ಯಾನಿಟೈಸರ್ ಸೇರಿ ಹಲವು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡು ಶೂಟಿಂಗ್ ಮಾಡಬೇಕೆಂದು ತಿಳಿಸಲಾಗಿದೆ.