ಚೆನ್ನೈ( ತಮಿಳುನಾಡು): ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಅವರು ಇನ್ಸ್ಟಾಗ್ರಾಂ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಐಶ್ವರ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಈ ಸಂಬಂಧ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು, ಎಲ್ಲ ಮುನ್ನೆಚ್ಚರಿಕೆಗಳ ನಡುವೆಯೂ ತಮಗೆ ಕೋವಿಡ್ ಪಾಸಿಟಿವ್ ಬಂದಿದ್ದು, ತಾವು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯಮಾಡಿ ನೀವೆಲ್ಲ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳಿ, ಅವಶ್ಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.