ನವದೆಹಲಿ:ಎರಡನೇ ಹಂತದ ಕೋವಿಡ್ ಅಲೆಗೆ ಸಿಲುಕಿರುವ ಭಾರತ ಸಂಪೂರ್ಣವಾಗಿ ತತ್ತರಿಸಿ ಹೋಗಿದ್ದು, ಇದರಿಂದ ಹೊರಬರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ದೇಶದ ಪ್ರಮುಖ ನಗರಗಳಲ್ಲಿ ಬೆಡ್, ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಮೂಲ ಸೌಕರ್ಯಗಳ ಕೊರತೆ ಉಂಟಾಗಿದೆ. ಹೀಗಾಗಿ ಪ್ರತಿದಿನ ನೂರಾರು ಕೋವಿಡ್ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.
ಮಹಾಮಾರಿ ವಿರುದ್ಧದ ಹೋರಾಟಕ್ಕೆ ಅನೇಕರು ಕೈಜೋಡಿಸುತ್ತಿದ್ದು, ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ಸಹಾಯಹಸ್ತ ಚಾಚಿದ್ದಾರೆ. ಈ ನಿಟ್ಟಿನಲ್ಲಿ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ. ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರ ಗಂಭೀರ್ ಫೌಂಡೇಷನ್ಗೆ 1 ಕೋಟಿ ರೂ. ದೇಣಿಗೆ ನೀಡಿರುವ ನಟ ಆಹಾರ, ಆಕ್ಸಿಜನ್ ಸೇರಿದಂತೆ ಪ್ರಮುಖ ವಸ್ತುಗಳ ಖರೀದಿಗೆ ಬಳಸಿಕೊಳ್ಳುವಂತೆ ತಿಳಿಸಿದ್ದಾರೆ.