ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ಆಕೆಯ ಬಾಯ್ಫ್ರೆಂಡ್ ರಣಬೀರ್ ಕಪೂರ್ ಜಂಗಲ್ ಸಫಾರಿಗೆ ಹೋಗಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಪ್ರವಾಸದ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವ ನಟಿ ಆಲಿಯಾ ಅಭಿಮಾನಿಗಳಿಗೆ ಖುಷಿ ನೀಡುತ್ತಿದ್ದಾರೆ.
ರಾಜಸ್ಥಾನದ ರಂಥಂಬೋರ್ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ಕೊಟ್ಟಿರುವ ಆಲಿಯಾ ಕುಟುಂಬ ಸಮೇತ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಜೀಪ್ನಲ್ಲಿ ಹೋಗುವ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿ, 'ಹ್ಯಾಪಿ ನ್ಯೂ ಜರ್ನಿ, ಸೇಫ್ ಟ್ರಾವೆಲ್' ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಫೋಟೋವನ್ನು ಹಂಚಿಕೊಂಡಿದ್ದು, ಅದರಲ್ಲಿ ಕಾಡಿನ ಮಧ್ಯೆ ಇರುವ ದಾರಿ ಕಾಣಿಸುತ್ತಿದೆ.