ಕರ್ನಾಟಕ

karnataka

By

Published : Apr 28, 2021, 12:59 PM IST

ETV Bharat / sitara

ಟಾಲಿವುಡ್ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್​ಗೆ ಕೊರೊನಾ

ನಾನು ಆರೋಗ್ಯವಾಗಿದ್ದು, ನನ್ನ ಅಭಿಮಾನಿಗಳು ಮತ್ತು ಹಿತೈಷಿಗಳು ಯಾವುದೇ ಆತಂಕಪಡಬೇಡಿ' ಎಂದು ಮನವಿ ಮಾಡಿದ್ದಾರೆ..

Allu Arjun Tests Positive for Coronavirus
ಟಾಲಿವುಡ್ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್​ಗೆ ಕೊರೊನಾ

ಹೈದರಾಬಾದ್:ಟಾಲಿವುಡ್ ಸ್ಟೈಲಿಷ್ ಸ್ಟಾರ್​​ ಅಲ್ಲು ಅರ್ಜುನ್​ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ವಿಚಾರವನ್ನು ಸ್ವತಃ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಲ್ಲು ಅರ್ಜುನ್, 'ನನಗೆ ಸೋಂಕು ಕಾಣಿಸಿಕೊಂಡಿದೆ. ಮನೆಯಲ್ಲಿ ಐಸೋಲೇಟ್ ಆಗಿದ್ದೇನೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದೇನೆ.

ನಾನು ಆರೋಗ್ಯವಾಗಿದ್ದು, ನನ್ನ ಅಭಿಮಾನಿಗಳು ಮತ್ತು ಹಿತೈಷಿಗಳು ಯಾವುದೇ ಆತಂಕಪಡಬೇಡಿ' ಎಂದು ಮನವಿ ಮಾಡಿದ್ದಾರೆ.

ಸದ್ಯಕ್ಕೆ ಅಲ್ಲು ಅರ್ಜುನ್ ಅವರ ಪುಷ್ಪಾ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಆಗಸ್ಟ್ 13ಕ್ಕೆ ತೆರೆಗೆ ಅಪ್ಪಳಿಸಲು ಮುಹೂರ್ತ ಫಿಕ್ಸ್ ಆಗಿದೆ.

ABOUT THE AUTHOR

...view details