ಹೈದರಾಬಾದ್(ತೆಲಂಗಾಣ) :ಬಾಲಿವುಡ್ನ ಹಿರಿಯ ನಟ ಅಮಿತಾಭ್ ಬಚ್ಚನ್ ಮಾಡಿರುವ ಟ್ವೀಟ್ವೊಂದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಯಾವ ಕಾರಣಕ್ಕಾಗಿ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆಂಬುದರ ಬಗ್ಗೆ ಈವರೆಗೆ ಯಾವುದೇ ರೀತಿಯ ಖಚಿತ ಮಾಹಿತಿ ಲಭ್ಯವಾಗಿಲ್ಲ.
ನಿನ್ನೆ ರಾತ್ರಿ ಟ್ವೀಟರ್ನಲ್ಲಿ 'ಹೃದಯ ಬಡಿಯುತ್ತಿದೆ.. ಕಾಳಜಿ ಜೊತೆಗೆ ಭರವಸೆ ಇದೆ'("Heart pumping .. concerned .. and the hope ...") ಎಂದು ಅಮಿತಾಭ್ ಬಚ್ಚನ್ ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ ದಿಢೀರ್ ಶಾಕ್ಗೊಳಗಾಗಿದ್ದ ಅವರ ಅಭಿಮಾನಿಗಳು ಆರೋಗ್ಯದ ಬಗ್ಗೆ ನಿಗಾವಹಿಸಿ, ಆದಷ್ಟು ಬೇಗ ಚೇತರಿಸಿಕೊಳ್ಳಿ ಎಂಬ ಸಂದೇಶ ರವಾನೆ ಮಾಡಿದ್ದಾರೆ.
ಇದರ ಮಧ್ಯೆ ವಿಶ್ರಾಂತಿ ಪಡೆದುಕೊಂಡು ಚೆನ್ನಾಗಿ ನಿದ್ದೆ ಮಾಡಿ ಸರ್ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ಆದರೆ, ಯಾವ ಕಾರಣಕ್ಕಾಗಿ ಬಿಗ್ ಬಿ ಈ ರೀತಿಯಾಗಿ ಬರೆದುಕೊಂಡಿದ್ದಾರೆಂಬ ಮಾಹಿತಿ ಮಾತ್ರ ಸಿಕ್ಕಿಲ್ಲ. ಈ ಟ್ವೀಟ್ ಸಿಕ್ಕಾಪಟ್ಟೆ ವೈರಲ್ ಆಗಿದೆ.