ಕರ್ನಾಟಕ

karnataka

ETV Bharat / sitara

ವಿಷ್ಣು ಪ್ರತಿಮೆ ಧ್ವಂಸ : ಕಿಡಿಗೇಡಿಗಳಿಗೆ ಶಿಕ್ಷೆಯಾಗಬೇಕೆಂದ ಅನಿರುದ್ಧ್ - actor Anirudh

ಮಾಗಡಿ ರೋಡ್​​ನ ಟೋಲ್ ಗೇಟ್ ಬಳಿ‌ ಪ್ರತಿಷ್ಠಾಪನೆ ಮಾಡಲಾಗಿದ್ದ ಡಾ. ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದಾರೆ. ಇದು ವಿಷ್ಣುವರ್ಧನ್ ಕುಟುಂಬ ಹಾಗೂ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Anirudh spoke about the destruction of the Vishnu Vardhan statue
ವಿಷ್ಣು ಪ್ರತಿಮೆ ಧ್ವಂಸ : ಕಿಡಿಗೇಡಿಗಳಿಗೆ ಶಿಕ್ಷೆಯಾಗಬೇಕೆಂದ ಅನಿರುದ್ಧ್​​

By

Published : Dec 26, 2020, 3:31 PM IST

ಕನ್ನಡ ಚಿತ್ರರಂಗದಲ್ಲಿ ಸಾಹಸಸಿಂಹನಾಗಿ ಮೆರೆದ ನಟ ಡಾ. ವಿಷ್ಣುವರ್ಧನ್ ಬಗ್ಗೆ ಇತ್ತೀಚೆಗೆ​ ಒಂದಲ್ಲ ಒಂದು ವಿವಾದಗಳು ನಡೆಯುತ್ತಲೇ ಇವೆ. ಕೆಲವು ದಿನಗಳ ಹಿಂದೆ ತೆಲುಗು ನಟ ವಿಜಯ್​ ರಂಗರಾಜು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಇದೀಗ ಕಿಡಿಗೇಡಿಗಳು ವಿಷ್ಣುವರ್ಧನ್​​ ಪ್ರತಿಮೆಯನ್ನು ಧ್ವಂಸ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಇದನ್ನೂ ಓದಿ : ರಾತ್ರೋ ರಾತ್ರಿ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ‌ ಕಿಡಿಗೇಡಿಗಳು

ಮಾಗಡಿ ರೋಡ್​​ನ ಟೋಲ್ ಗೇಟ್ ಬಳಿ‌ ಪ್ರತಿಷ್ಠಾಪನೆ ಮಾಡಲಾಗಿದ್ದ ಡಾ. ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದಾರೆ. ಇದು ವಿಷ್ಣುವರ್ಧನ್ ಕುಟುಂಬ ಹಾಗೂ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್​​, ಈ ಘಟನೆ ಬಗ್ಗೆ ತುಂಬಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಷ್ಣು ಪ್ರತಿಮೆ ಧ್ವಂಸ : ಕಿಡಿಗೇಡಿಗಳಿಗೆ ಶಿಕ್ಷೆಯಾಗಬೇಕೆಂದ ಅನಿರುದ್ಧ್​​

ಈ ಘಟನೆ ಬಗ್ಗೆ ಸಚಿವ ಸೋಮಣ್ಣ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ. ಹೀಗಾಗಿ ಸೋಮಣ್ಣನವರು ಪ್ರತಿಮೆಯನ್ನು ಬೇರೆ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡೋದಿಕ್ಕೆ ಹೇಳಿದ್ದಾರೆ ಅದು ಖುಷಿಯ ವಿಚಾರ. ಆದರೆ ಅಪ್ಪಾಜಿಯವರ ಪ್ರತಿಮೆ ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಶಿಕ್ಷೆ ಆಗಬೇಕು ಎಂದು ಪೊಲೀಸ್ ಇಲಾಖೆಗೆ ಅನಿರುದ್ಧ್​​​ ಮನವಿ ಮಾಡಿದ್ದಾರೆ.

ABOUT THE AUTHOR

...view details