ಬೆಂಗಳೂರು :ಸ್ಯಾಂಡಲ್ವುಡ್ ನಟ - ನಟಿಯರ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ವಶದಲ್ಲಿರುವ ಕಾರ್ತಿಕ್ ರಾಜ್ ಹಾಗೂ ಅನಿಕಾ ಗ್ಯಾಂಗ್ ಲಿಂಕ್ ಇರುವ ಸಂಗತಿ ಬೆಳಕಿಗೆ ಬಂದಿದೆ. ಕಾರ್ತಿಕ್ ರಾಜ್ ತನ್ನೊಂದಿಗಿದ್ದ ಪರಿಚಯಯಸ್ಥರ ಹೆಸರನ್ನು ಇದೀಗ ಬಹಿರಂಗಪಡಿಸಿದ್ದಾನೆ ಎನ್ನಲಾಗುತ್ತಿದೆ.
ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ಸ್ನೇಹಿತನಾಗಿದ್ದ ಕಾರ್ತಿಕ್ ರಾಜ್ಗೆ ಕೇಂದ್ರದ ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬಂಧನಕ್ಕೆ ಒಳಗಾಗಿರುವ ಆರೋಪಿಗಳ ಪೈಕಿ ಓರ್ವನಾದ ಅನೂಪ್ ಮೊಹಮ್ಮದ್ನ ಪರಿಚಯವಿದೆಯಂತೆ.
ಈ ಬಗ್ಗೆ ಸಿಸಿಬಿ ತನಿಖಾಧಿಕಾರಿಗಳ ಮುಂದೆ ಕಾರ್ತಿಕ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಕಾರ್ತಿಕ್ ಆಯೋಜಿಸಿದ್ದ ಪಾರ್ಟಿಗಳಲ್ಲಿ ಅನೂಪ್ ಸಹ ಭಾಗಿಯಾಗುತ್ತಿದ್ದ. ಆದರೆ, ಈ ಡ್ರಗ್ಸ್ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾನೆ ಎಂದು ತಿಳಿದುಬಂದಿದೆ.
ಇನ್ನು ಕೆಲ ವರ್ಷಗಳಿಂದ ಸಿಸಿಬಿ ಬಂಧನಕ್ಕೆ ಒಳಗಾಗಿದ್ದ ಪ್ರತೀಕ್ ಶೆಟ್ಟಿ ಆರೋಪಿಯೊಂದಿಗೆ ನಂಟು ಇರುವುದು ಮೆಲ್ನೋಟಕ್ಕೆ ಕಂಡುಬಂದಿದೆ. ಸ್ಯಾಂಡಲ್ವುಡ್ ನಟ ನಟಿಯರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಆರೋಪದಡಿ ಅನಿಕಾ, ಅನೂಪ್ ಸೇರಿದಂತೆ ಮೂವರು ಆರೋಪಿಗಳನ್ನು ಎನ್ಸಿಬಿ ಬಂಧಿಸಿತ್ತು. ವಿಚಾರಣೆ ವೇಳೆ ನಟ - ನಟಿಯರಿಗೆ ಮಾದಕ ವಸ್ತು ಸಪ್ಲೈ ಮಾಡುತ್ತಿರುವುದಾಗಿ ತನಿಖಾಧಿಕಾರಿಗಳ ಮುಂದೆ ಬಾಯ್ಬಿಟಿದ್ದಾರೆ. ಮೂಲಗಳ ಪ್ರಕಾರ ಕಾರ್ತಿಕ್ ರಾಜ್ನನ್ನು ಬಂಧಿಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.