ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ 31ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಬರ್ತ್ ಡೇ ಬಾಯ್ಗೆ ಪತ್ನಿ ಅನುಷ್ಕಾ ಶರ್ಮಾ ತುಂಬು ಹೃದಯದ ಶುಭಾಷಯ ಹೇಳಿದ್ದಾರೆ.
ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋಗಳನ್ನು ಶೇರ್ ಮಾಡಿರುವ ಜೀರೋ ಸಿನಿಮಾ ನಾಯಕಿ, ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು 'ಟ್ರು ಲವ್' ಎಂದು ಬಣ್ಣಿಸಿದ್ದಾರೆ. ಇನ್ನು ತಾನು ವಿರಾಟ್ ಜೊತೆ ಇರುವ ಮೆಮೋರಬಲ್ ಫೋಟೋಗಳನ್ನು ಶೇರ್ ಮಾಡಿದ್ದು, ಈ ಪೋಸ್ಟ್ಗೆ ಲೈಕ್ ಹಾಗೂ ಕಮೆಂಟ್ಗಳ ಸುರಿಮಳೆ ಬರುತ್ತಿದೆ.