'ಡೈನಾಮಿಕ್ ಪ್ರಿನ್ಸ್' ಪ್ರಜ್ವಲ್ ದೇವರಾಜ್-ಪ್ರಿಯಾಂಕಾ ತಿಮ್ಮೇಶ್ ಜೊತೆಯಾಗಿ ನಟಿಸಿರುವ 'ಅರ್ಜುನ್ ಗೌಡ' ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದ್ದು, ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ತೆರೆಗೆ ಬರುವುದಕ್ಕೆ ಸಿದ್ಧವಾಗಿದೆ.
ಪ್ರಜ್ವಲ್ ದೇವರಾಜ್ ಅವರ ಇನ್ಸ್‌ಪೆಕ್ಟರ್ ವಿಕ್ರಂ ಸಿನಿಮಾದ ಸಕ್ಸಸ್ ಬಳಿಕ ಬಿಡುಗಡೆಯಾಗುತ್ತಿರುವ ಎರಡನೇ ಚಿತ್ರ ಇದು. ಈ ಚಿತ್ರದಲ್ಲಿ ಪ್ರಜ್ವಲ್ ರಫ್ ಆ್ಯಂಡ್ ಟಫ್ ಆಗಿ ಕಾಣಿಸಿಕೊಂಡಿದ್ದಾರೆ. ಕಾಮಿಡಿ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿದ್ದ ನಿರ್ದೇಶಕ ಲಕ್ಕಿ ಶಂಕರ್, ಅರ್ಜುನ್ ಗೌಡ ಚಿತ್ರಕ್ಕೆ ಕಥೆ-ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಆ್ಯಕ್ಷನ್, ಕಟ್ ಹೇಳಿದ್ದಾರೆ. ಬೆಂಗಳೂರು, ಮುಂಬೈ, ಚೆನೈ ಹಾಗೂ ಕೊಲ್ಕತ್ತ ನಗರಗಳ ಪ್ರಸಿದ್ದ ಸ್ಟುಡಿಯೋಗಳಲ್ಲಿ ಈ ಚಿತ್ರದ ರೆಕಾರ್ಡಿಂಗ್ ನಡೆದಿರುವುದು ವಿಶೇಷ.