ಕರ್ನಾಟಕ

karnataka

ETV Bharat / sitara

ಸಂಗೀತ ನಿರ್ದೇಶಕ ಅರ್ಜುನ್​​ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ - ಸಂಗೀತ ನಿರ್ದೇಶಕ ಅರ್ಜುನ್ ಜನ್ಯ

ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಸ್ಯಾಂಡಲ್​​ವುಡ್​​ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

arjun janya discharge from hospital
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

By

Published : Feb 28, 2020, 7:20 PM IST

ಮೈಸೂರು:ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಸ್ಯಾಂಡಲ್​​ವುಡ್​​ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ರಿಂದ ಅವರನ್ನು ನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇವರಿಗೆ ಹೃದಯದಲ್ಲಿ ಶೇ. 99ರಷ್ಟು ಬ್ಲಾಕ್ ಆಗಿತ್ತು ಎನ್ನಲಾಗಿದೆ. ಸರಿಯಾದ ಚಿಕಿತ್ಸೆ ನೀಡಿ ಆಂಜಿಯೋಗ್ರಾಂ, ಆಂಜಿಯೋಪ್ಲ್ಯಾಸ್ಟಿ ಸಹ ಮಾಡಲಾಗಿದೆ.

ಸದ್ಯ ಅರ್ಜುನ್​​ ಜನ್ಯ ಚೇತರಿಸಿಕೊಂಡಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅಲ್ಲದೆ ಚಿಕಿತ್ಸೆ ನೀಡಿದ ವೈದ್ಯರು, 8 ವಾರ ಸಂಪೂರ್ಣ ವಿಶ್ರಾಂತಿಯಲ್ಲಿರಬೇಕೆಂದು ತಿಳಿಸಿದ್ದಾರೆ.

ABOUT THE AUTHOR

...view details