ಕರ್ನಾಟಕ

karnataka

ETV Bharat / sitara

ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ 40 ಲಕ್ಷ ರೂಪಾಯಿಗಳ ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಜೆ.ಎಂ.ಎಫ್‌.ಸಿ 5 ನೇ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ.

ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

By

Published : Feb 11, 2021, 4:24 PM IST

ಮಂಗಳೂರು: ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ 40 ಲಕ್ಷ ರೂಪಾಯಿಗಳ ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಜೆ.ಎಂ.ಎಫ್‌.ಸಿ 5 ನೇ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ.

ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಸದರಿ ವಾರಂಟ್‌ನ್ನು ಈಗಾಗಲೇ ತಲಘಟ್ಟಪುರ ಪೊಲೀಸ್‌ ಠಾಣೆಗೆ ರವಾನಿಸಲಾಗಿದ್ದು, ಪದ್ಮಜಾ ರಾವ್ ರವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ.

ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್‌ನಿಂದ ಹಿರಿಯ ನಟಿ ಪದ್ಮಜಾ ರಾವ್ ಅವರು ಹಂತ ಹಂತವಾಗಿ ಸುಮಾರು 41 ಲಕ್ಷ ರೂಪಾಯಿಗಳನ್ನು ಬ್ಯಾಂಕ್‌ ಖಾತೆಯ ಮೂಲಕ ಸಾಲ ಪಡೆದುಕೊಂಡಿದ್ದು, ಈ ಸಾಲದ ಭದ್ರತೆಗಾಗಿ 40 ಲಕ್ಷ ರೂಪಾಯಿಗಳ ಚೆಕ್‌ ನೀಡಿದ್ದರು.

ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಪದ್ಮಜಾ ರಾವ್ ಸಾಲ ವಾಪಸ್ಸು ಮಾಡದೆ ವಂಚಿಸಿದಾಗ ವೀರೂ ಟಾಕೀಸ್‌ ಸಂಸ್ಥೆಯಿಂದ ಸದ್ರಿ ಚೆಕ್‌ ಅನ್ನು ಪದ್ಮಜಾ ರಾವ್ ಖಾತೆಗೆ ಹಾಕಲಾಗಿತ್ತು. ಆದರೆ ಖಾತೆಯಲ್ಲಿ ಹಣವಿಲ್ಲದೆ ಚೆಕ್‌ ಬೌನ್ಸ್ ಆಗಿದ್ದು ಈ ಬಗ್ಗೆ ಮಂಗಳೂರಿನ ಜೆ.ಎಂ.ಎಫ್‌.ಸಿ ಐದನೇ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಿದ್ದ ಸಮನ್ಸನ್ನು ಸ್ವೀಕರಿಸಲು ನಿರಾಕರಿಸುತ್ತಾ ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ABOUT THE AUTHOR

...view details