ಬೆಂಗಳೂರು:ಹಾಸ್ಯನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ 9 ಗಂಟೆಗೆ ಜಿಮ್ನಿಂದ ಮನೆಗೆ ವಾಪಸ್ ಆಗುತ್ತಿದ್ದ ರಕ್ಷಕ್ ಮೇಲೆ ಹೆಬ್ಬಾಳ ಬಳಿ ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಹೆಬ್ಬಾಳ ಪ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದಿದ್ದಾರೆ. ಆಗ ರಕ್ಷಕ್ ಬೈಕ್ನಿಂದ ಕೆಳಗೆ ಬಿದ್ದಿದ್ದು, ಕಾಲಿಗೆ ತರಚಿದ ಗಾಯಗಳಾಗಿವೆ. ಮಂಗಳಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ಫ್ಲೈ ಓವರ್ ಮೇಲೆಯೇ ಬೈಕ್ ಬಿಟ್ಟು ಓಡಿಹೋಗಿದ್ದಾನೆ ಎಂದು ತಿಳಿದು ಬಂದಿದೆ.