ವಿಶ್ವದಾದ್ಯಂತ ಕೊರೊನಾ ಎಂಬ ಮಹಾಮಾರಿ ರಣಕೇಕೆ ಹಾಕುತ್ತಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ಸರ್ಕಾರ ವಿನೂತನವಾಗಿ, ಕೊರೊನಾ ವಿರುದ್ದ ಹೋರಾಟ ಮಾಡಲು ಮಾಸ್ಕ್ ಡೇ ಅಂತಾ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.
ಹೀಗಾಗಿ ಇಂದು ರಾಜ್ಯಾದ್ಯಂತ ಮಾಸ್ಕ್ ಡೇ ಆಚರಿಸಲಾಗಿದೆ. ಈ ಮಾಸ್ಕ್ ಡೇಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಈ ಅಭಿಯಾನಕ್ಕೆ ಈಗಾಗಲೇ ಪುನೀತ್ ರಾಜ್‍ಕುಮಾರ್, ರಾಗಿಣಿ ಕೈ ಜೋಡಿಸಿದ್ದಾರೆ.