ಕರ್ನಾಟಕ

karnataka

ETV Bharat / sitara

ಹಿರಿಯರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಆಯುಷ್ಮಾನ್​ ಖುರಾನ್​​

ಬಾಲಿವುಡ್​​ ನಟ ಆಯುಷ್ಮಾನ್​ ಖುರಾನ್​​ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಜೊತೆ ಕೈಜೋಡಿಸಿ ಹಿರಿಯ ನಾಗರಿಕರಿಗೆ ಕೊರೊನಾ ವೈರಸ್‌ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

Ayushmann raises awareness about medical attention of senior citizens
ಹಿರಿಯರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಆಯುಷ್ಮಾನ್​ ಖುರಾನ್​​

By

Published : May 17, 2020, 5:57 PM IST

ಬಾಲಿವುಡ್​​ನ ಡ್ರೀಮ್​ ಸಿನಿಮಾ ನಟ ಆಯುಷ್ಮಾನ್​ ಖುರಾನ್​ ಇದೀಗ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಅದ್ರಲ್ಲೂ ಹಿರಿಯ ನಾಗರಿಕರಿಗೆ ಈ ಸಮಯದಲ್ಲಿ ಏನೆಲ್ಲ ಕ್ರಮಗಳನ್ನು ಕೈಗೂಳ್ಳಬೇಕು ಎಂಬುದರ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಜೊತೆ ಕೈಜೋಡಿಸಿ ಜಾಗೃತಿ ಕಾರ್ಯಕ್ಕೆ ಮುಂದಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಯುಷ್ಮಾನ್​ ಖುರಾನ್​​, ಕೊರೊನಾದ ಈ ಸಂಕಷ್ಟದ ಸಮಯದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹ್ಯಾಪಿ ಟು ಹೆಲ್ಪ್​​ ಎಂಬ ಟಾಸ್ಕ್​ ಫೋರ್ಸ್​​ ರಚಿಸಿದೆ. ಇದರಿಂದ ಹಿರಿಯ ನಾಗರಿಕರಿಗೆ ಸಹಾಯ ಮಾಡುತ್ತಿದೆ. ವೃದ್ಧರಿಗೆ ಬೇಕಾಗುವ ವೈದ್ಯಕೀಯ ಸೌಲಭ್ಯಗಳ ಬಗ್ಗೆ ಈ ಆಯೋಗವು ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಅಭಿಮಾನಿಗಳಿಗೂ ಅಸಹಾಯಕರಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಈ ರೀತಿಯ ಕೆಲಸ ಮಾಡಲು ನನಗೆ ಹೆಮ್ಮೆ ಅನಿಸುತ್ತದೆ. ದೇಶದ ಎಲ್ಲ ಜನರು ಸ್ವಯಂ ಪ್ರೇರಿತರಾಗಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details