ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಹೊಸ ಚಿತ್ರ ‘ಬಚ್ಚನ್ ಪಾಂಡೆ’ ಟ್ರೈಲರ್ ಶುಕ್ರವಾರ ರಿಲೀಸ್ ಆಗಿದ್ದು, ಸಖತ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಕ್ರೈಮ್, ಆ್ಯಕ್ಷನ್, ಕಾಮಿಡಿ ಸಿನಿಮಾವಾದ 'ಬಚ್ಚನ್ ಪಾಂಡೆ'ಯಲ್ಲಿ ಅಕ್ಷಯ್ ಕುಮಾರ್, ಕೃತಿ ಸನೋನ್, ಜಾಕ್ವೆಲಿನ್ ಫರ್ನಾಂಡಿಸ್ ಸೇರಿದಂತೆ ಮೊದಲಾದ ತಾರಾ ನಟರ ದಂಡೇ ಇದೆ. ಅಕ್ಷಯ್ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಸಿಕೊಂಡಿದ್ದು, ಗ್ಯಾಂಗ್ಸ್ಟರ್ ಆಗಿ ಅಬ್ಬರಿಸಿದ್ದಾರೆ.
'ಬಚ್ಚನ್ ಪಾಂಡೆ’ ಟ್ರೈಲರ್ ರಿಲೀಸ್: ಗ್ಯಾಂಗ್ಸ್ಟರ್ ಆಗಿ ಅಬ್ಬರಿಸಿದ ಅಕ್ಷಯ್ ಕುಮಾರ್ - ಬಾಲಿವುಡ್ ನಟ ಅಕ್ಷಯ್ ಕುಮಾರ್
ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ 'ಬಚ್ಚನ್ ಪಾಂಡೆ' ಸಿನಿಮಾದ ಟ್ರೈಲರ್ ಶುಕ್ರವಾರ ಬಿಡುಗಡೆಯಾಗಿದೆ.
ಬಚ್ಚನ್ ಪಾಂಡೆ ಟ್ರೈಲರ್ ರಿಲೀಸ್
ಸದ್ಯಕ್ಕೆ 3.41 ನಿಮಿಷಗಳ ದೀರ್ಘ ಟ್ರೈಲರ್ ಅನ್ನು ಚಿತ್ರ ತಂಡ ಬಿಡುಗಡೆ ಮಾಡಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ‘ಬಚ್ಚನ್ ಪಾಂಡೆ’ ಯನ್ನು ಫರ್ಹಾದ್ ಸಮ್ಜಿ ನಿರ್ದೇಶನ ಮಾಡಿದ್ದು, ಸಾಜಿದ್ ನಾಡಿಯದ್ವಾಲಾ ನಿರ್ಮಾಣ ಮಾಡಿದ್ದಾರೆ. ಮಾರ್ಚ್ 18ರಂದು ಚಿತ್ರ ತೆರೆ ಕಾಣಲಿದೆ.