ಕರ್ನಾಟಕ

karnataka

ETV Bharat / sitara

ಉತ್ತರ ಕರ್ನಾಟಕದ ’ಬಯಲುಸೀಮೆ’ ಕೋಟೆಯಲ್ಲಿ ಆರುಮುಗಂ ರವಿಶಂಕರ್...! - Bayaluseeme latest News

ಉತ್ತರ ಕರ್ನಾಟಕ ಶೈಲಿಯಲ್ಲಿ ತಯಾರಾಗಿರೋ ‘ಬಯಲುಸೀಮೆ’ ಸಿನಿಮಾ ನಾನಾ ಮಜಲುಗಳ, ಮೈನವಿರೇಳಿಸೋ ತಿರುವುಗಳ ಮೂಲಕ ಪ್ರೇಕ್ಷಕರನ್ನು ಬೇರೆಯದ್ದೇ ಜಗತ್ತಿಗೆ ಕೊಂಡೊಯ್ಯುವಂತೆ ಮೂಡಿ ಬಂದಿದೆಯಂತೆ. ಈ ಸಿನಿಮಾದಲ್ಲಿ ಭಯ ಹುಟ್ಟಿಸೋ ಪಾತ್ರಗಳಿವೆ. ಅದಕ್ಕೆ ಅತಿರಥ ಮಹಾರಥ ಕಲಾವಿದರುಗಳು ಜೀವ ತುಂಬಿದ್ದಾರೆ.

Bayaluseeme
‘ಬಯಲುಸೀಮೆ’ ಸಿನಿಮಾ ತಂಡ

By

Published : Sep 22, 2021, 10:59 AM IST

ಕನ್ನಡ ಚಿತ್ರರಂಗದಲ್ಲಿ ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆಗಳ ಬಗ್ಗೆ ಕನ್ನಡದ ಪ್ರೇಕ್ಷಕರರಲ್ಲಿ ಯಾವತ್ತಿಗೂ ಒಂದು ವಿಶೇಷ ಪ್ರೀತಿ ಜಾರಿಯಲ್ಲಿರುತ್ತೆ. ಇದೀಗ ಅದೇ ಸೊಗಡಿನ ಪಕ್ಕಾ ರಗಡ್ ಕಥೆ ಹೊಂದಿರುವ ಬಯಲು ಸೀಮೆ ಸಿನಿಮಾವೊಂದು ಬರ್ತಾ ಇದೆ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಜಾನರ್​ನಲ್ಲಿ ಈ ಸಿನಿಮಾದ ಕಥೆಗೆ ತಕ್ಕುದಾಗಿ ‘ಬಯಲುಸೀಮೆ’ ಎಂಬ ಶೀರ್ಷಿಕೆ ಇಡಲಾಗಿದೆ.

ಸಂಪೂರ್ಣವಾಗಿ ಉತ್ತರ ಕರ್ನಾಟಕ ಶೈಲಿಯಲ್ಲಿ ತಯಾರಾಗಿರೋ ಈ ಸಿನಿಮಾ ನಾನಾ ಮಜಲುಗಳ, ಮೈನವಿರೇಳಿಸೋ ತಿರುವುಗಳ ಮೂಲಕ ಪ್ರೇಕ್ಷಕರನ್ನು ಬೇರೆಯದ್ದೇ ಜಗತ್ತಿಗೆ ಕೊಂಡೊಯ್ಯುವಂತೆ ಮೂಡಿ ಬಂದಿದೆಯಂತೆ. ಈ ಸಿನಿಮಾದಲ್ಲಿ ಭಯ ಹುಟ್ಟಿಸೋ ಪಾತ್ರಗಳಿವೆ. ಅದಕ್ಕೆ ಅತಿರಥ ಮಹಾರಥ ಕಲಾವಿದರುಗಳು ಜೀವ ತುಂಬಿದ್ದಾರೆ.

ನಟ ಆರುಮುಗಂ ರವಿಶಂಕರ್

ದೊಡ್ಡ ತಾರಾಗಣ ಹೊಂದಿರೋ ಬಯಲು ಸೀಮೆ ಸಿನಿಮಾದಲ್ಲಿ ಬಿಸಿಲ ನಾಡ ಪ್ರತಿಭೆಗಳೂ ಮಿಂಚಲು ಅಣಿಯಾಗಿದ್ದಾರೆ. ಈ ಸಾಲಿನಲ್ಲಿ ಆರುಮುಗಂ ರವಿಶಂಕರ್ ಗಜೇಂದ್ರ ಗಡ ಎಂಬ ಕೋಟೆಗೆ ಲಗ್ಗೆ ಇಟ್ಟಿದ್ದಾರೆ. ಅಷ್ಟೇ ಅಲ್ಲದೆ, ಇದೇ ಮೊದಲ ಬಾರಿಗೆ ನಟ, ನಿರ್ದೇಶಕ ಟಿ.ಎಸ್ ನಾಗಾಭರಣ ಜೊತೆ ರವಿಶಂಕರ್ ಸ್ಕ್ರೀನ್ ಹಂಚಿಕೊಂಡಿದ್ದಾರೆ.

ಇದರ ಜೊತೆಗೆ ಸಂಯುಕ್ತ ಹೊರನಾಡು, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ವರುಣ್ ಕಟ್ಟೀಮನಿ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕೈನವರ್, ಪ್ರದೀಪ್ ರಾಜ್ ಮುಂತಾದವರ ತಾರಾಗಣ ಈ ಸಿನಿಮಾದಲ್ಲಿದೆ.

ಲಕ್ಷ್ಮಣ್ ಸಾ ಶಿಂಗ್ರಿ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಯಲುಸೀಮೆಯನ್ನು ವರುಣ್ ಕಟ್ಟೀಮನಿ ನಿರ್ದೇಶನ ಮಾಡಿದ್ದಾರೆ. ಎಂಬತ್ತರ ದಶಕ ಮತ್ತು ಈವತ್ತಿನ ಕಾಲಮಾನದೊಂದಿಗೆ ಜುಗಲ್​ಬಂದಿ ಹೊಂದಿರುವ ಈ ಕಥೆ, ಆ ಎರಡು ಕಾಲಘಟ್ಟಗಳನ್ನೂ ಉತ್ತರ ಕರ್ನಾಟಕದ ಜವಾರಿ ಶೈಲಿಯಲ್ಲಿ ಕಟ್ಟಿಕೊಟ್ಟಿದೆಯಂತೆ.

‘ಬಯಲುಸೀಮೆ’ ಸಿನಿಮಾ ತಂಡ

ಸಾಹೂರಾವ್ ಶಿಂಧೆ ಎಂಬ ಶ್ರೀಮಂತ ವ್ಯಕ್ತಿಯ ಸುತ್ತ ಬಯಲು ಸೀಮೆಯ ಕಥೆ ಚಲಿಸುತ್ತೆ. ಆತನ ಸುತ್ತ ಹಬ್ಬಿಕೊಳ್ಳುವ ಅಕ್ರಮ ಸಂಬಂಧ, ಅದರ ಹಿನ್ನೆಲೆಯಲ್ಲೊಂದು ಲವ್ ಸ್ಟೋರಿ ಹಾಗೂ ಅದರ ಗರ್ಭದಲ್ಲಿಯೇ ಹುಟ್ಟಿಕೊಳ್ಳೋ ರಣ ದ್ವೇಷ, ಕ್ಷಣ ಕ್ಷಣವೂ ಪ್ರೇಕ್ಷಕರನ್ನು ರೋಮಾಂಚನಗೊಳ್ಳುವ ಕಥೆಯೊಂದಿಗೆ ಚಿತ್ರತಂಡ ಪ್ರೇಕ್ಷಕರ ಮುಂದೆ ತಂದಿಡಲಿದೆ.

ಸುಜಯ್ ಕುಮಾರ್ ಬಾವಿಕಟ್ಟಿ ಛಾಯಾಗ್ರಹಣ, ಮಾನಸ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಮತ್ತು ರಾಮು ಅವರ ನೃತ್ಯ ಸಂಯೋಜನೆಯಿಂದ ಬಯಲುಸೀಮೆ ಸಿಂಗರಿಸಿಕೊಂಡಿದೆ. ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿರೋ ಬಯಲು ಸೀಮೆ ಸದ್ಯದಲ್ಲೇ ತೆರೆಗೆ ಬರಲಿದೆ.

ABOUT THE AUTHOR

...view details