ಕರ್ನಾಟಕ

karnataka

ETV Bharat / sitara

ಭಟ್ಟರ 'ಗರಡಿ'ಯಲ್ಲಿ ಕೌರವನ ಅಭಿನಯ.. ಮತ್ತೆ ಬಣ್ಣ ಹಚ್ಚಲಿರುವ ಸಚಿವ ಬಿ.ಸಿ ಪಾಟೀಲ್! - ಗರಡಿ ಸಿನಿಮಾದಲ್ಲಿ ಬಿ ಸಿ ಪಾಟೀಲ್ ಅಭಿನಯ

ಸದ್ಯ ಗಾಳಿಪಟ-2 ಸಿನಿಮಾದಲ್ಲಿ ಬ್ಯುಸಿಯಾಗಿರೋ ಯೋಗರಾಜ್ ಭಟ್, ಈ ಸಿನಿಮಾ ಬಿಡುಗಡೆ ಮುಂಚೆಯೇ ಹೊಸ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಈ ಚಿತ್ರಕ್ಕೆ ಗರಡಿ ಅಂತಾ ಟೈಟಲ್ ಇಟ್ಟಿದ್ದು, ಕೌರವ ಬಿ.ಸಿ ಪಾಟೀಲ್ ಬಹಳ ದಿನಗಳ ನಂತರ ಒಂದು ಪ್ರಮುಖ ಪಾತ್ರಕ್ಕಾಗಿ ಈ ಸಿನಿಮಾದ ಮೂಲಕ ಮತ್ತೆ ಬಣ್ಣ ಹಚ್ಚಲಿದ್ದಾರೆ..

BC Patil in Garadi movie
ಗರಡಿ ತಂಡ

By

Published : Nov 20, 2021, 10:59 PM IST

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ತಮ್ಮದೇ ಬೇಡಿಕೆ ಹೊಂದಿರುವ ನಿರ್ದೇಶಕ ಯೋಗರಾಜ್ ಭಟ್ರು. ಸದ್ಯ ಗಾಳಿಪಟ-2 ಸಿನಿಮಾದಲ್ಲಿ ಬ್ಯುಸಿಯಾಗಿರೋ ಯೋಗರಾಜ್ ಭಟ್, ಈ ಸಿನಿಮಾ ಬಿಡುಗಡೆ ಮುಂಚೆಯೇ ಹೊಸ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಈ ಚಿತ್ರಕ್ಕೆ ಗರಡಿ ಅಂತಾ ಟೈಟಲ್ ಇಟ್ಟಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ಹಾಗು ಟೈಟಲ್ ಲಾಂಚ್ ಕಾರ್ಯಕ್ರಮಗಳು ಹಾವೇರಿ ಜಿಲ್ಲೆಯ ಹಿರೆಕೆರೂರಿನಲ್ಲಿ ನೆರವೇರಿತು.

ಗರಡಿ ತಂಡ

ಈ‌ ಚಿತ್ರದಲ್ಲಿ ನಾಯಕನಾಗಿ ಯುವ ನಟ ಯಶಸ್ ಸೂರ್ಯ ನಟಿಸುತ್ತಿದ್ದು, ಕೌರವ ಬಿ.ಸಿ ಪಾಟೀಲ್ ಬಹಳ ದಿನಗಳ ನಂತರ ಒಂದು ಪ್ರಮುಖ ಪಾತ್ರಕ್ಕಾಗಿ ಈ ಸಿನಿಮಾದ ಮೂಲಕ ಮತ್ತೆ ಬಣ್ಣ ಹಚ್ಚಲಿದ್ದಾರೆ.

ಈ ಹಿಂದೆ ಹ್ಯಾಪಿ ನ್ಯೂ ಇಯರ್ ಚಿತ್ರದಲ್ಲಿ ಬಿ.ಸಿ ಪಾಟೀಲ್ ಅಭಿನಯಿಸಿದ್ದರು. ಇನ್ನು ಈ ಚಿತ್ರದಲ್ಲಿ ಕನ್ನಡದ ಸ್ಟಾರ್ ನಟರೊಬ್ಬರು ಅತಿಥಿ ಪಾತ್ರ ನಿರ್ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ನಾಯಕಿಯ ಪಾತ್ರಕ್ಕೆ ಹೆಸರಾಂತ ನಟಿಯೊಬ್ಬರು ಆಯ್ಕೆಯಾಗಬುಹುದೆಂಬ ಸೂಚನೆ ಸಿಕ್ಕಿದೆ.

ಇನ್ನುಳಿದಂತೆ ಚಿತ್ರದ ಬೇರೆ ಬೇರೆ ಪ್ರಮುಖ ಪಾತ್ರಗಳಿಗಾಗಿ ಕಲಾವಿದರ ಹುಡುಕಾಟ ನಡೆಯಲಿದೆ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡುತ್ತಿದ್ದು, ಜಯಂತ್ ಕಾಯ್ಕಿಣಿ ಹಾಗು ಯೋಗರಾಜ್ ಭಟ್ ಸಾಹಿತ್ಯ ರಚಿಸಲಿದ್ದಾರೆ.

ಗರಡಿ ತಂಡ

ಛಾಯಾಗ್ರಾಹಕ ನಿರಂಜನ್ ಬಾಬು ಇದೇ ಮೊದಲ ಬಾರಿಗೆ ಭಟ್ಟರ ಸಿನಿಮಾದಲ್ಲಿ ಛಾಯಾಗ್ರಾಹಕರಾಗಿ ಕೆಲಸ ಮಾಡಲಿದ್ದು, ಭಟ್ಟರ ಜೊತೆಗೂಡಿ ಡ್ರಾಮಾ ಚಿತ್ರದ ಚಿತ್ರಕಥೆ ರಚಿಸಿದ್ದ ವಿಕಾಸ್ ಈ ಚಿತ್ರದ ಮೂಲಕ ಭಟ್ಟರೊಡನೆ ಮತ್ತೊಮ್ಮೆ ಕೈಜೋಡಿಸಿದ್ದಾರೆ. ಸೌಮ್ಯ ಫಿಲಂಸ್ ಬ್ಯಾನರಿನಡಿಯಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ಸಚಿವರಾದ ಬಿ.ಸಿ.ಪಾಟೀಲ್ ರವರ ಪತ್ನಿ ವನಜಾ ಬಿ ಪಾಟೀಲ್ ಹಾಗು ಪುತ್ರಿ ಸೃಷ್ಟಿ ಪಾಟೀಲ್ ಬಂಡವಾಳ ಹೂಡಲಿದ್ದಾರೆ.

ABOUT THE AUTHOR

...view details