ಕರ್ನಾಟಕ

karnataka

ETV Bharat / sitara

ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಿವುಡ್​ ಬಿಗ್​ ಬಿ - cataract surgery

ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಯವಾಗಿದೆ. ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ಬರೆಯಲು ಸಾಧ್ಯವಾಗುತ್ತಿಲ್ಲ..

Amitabh Bachchan
ಬಾಲಿವುಡ್​ ಬಿಗ್​ ಬಿ

By

Published : Mar 1, 2021, 10:39 AM IST

ಮುಂಬೈ :ಬಾಲಿವುಡ್‌ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದು, 24 ಗಂಟೆ ಬಳಿಕ ಮನೆಗೆ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

"ಕೇವಲ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಅಷ್ಟೇ.. ಮುಂದಿನ 24 ಗಂಟೆಗಳಲ್ಲಿ ಅಮಿತಾಬ್ ಬಚ್ಚನ್ ಮನೆಗೆ ಬರಲಿದ್ದಾರೆ" ಎಂದು ನಟನ ಆಪ್ತ ಮೂಲವೊಂದು ಬಹಿರಂಗಪಡಿಸಿದೆ.

ಇನ್ನು, ಶನಿವಾರ (ಫೆ.27)ದಂದು ಶಸ್ತ್ರಚಿಕಿತ್ಸೆಗೆ ಹೋಗುವ ಮುನ್ನ ಬಚ್ಚನ್​ ಅವರು ತಮ್ಮ ವೈಯಕ್ತಿಕ ಬ್ಲಾಗ್​ನಲ್ಲಿ ಶಸ್ತ್ರ ಚಿಕಿತ್ಸೆ ಬಗ್ಗೆ ಬರೆದುಕೊಂಡಿದ್ದರು.

"ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಯವಾಗಿದೆ. ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ಬರೆಯಲು ಸಾಧ್ಯವಾಗುತ್ತಿಲ್ಲ" ಎಂದು ತಮ್ಮ ಬ್ಲಾಗ್‌ನಲ್ಲಿ ತಿಳಿಸಿದ್ದರು.

78 ವರ್ಷದ ಅಮಿತಾಬ್ ಬಚ್ಚನ್ ಇತ್ತೀಚೆಗೆ ಕೋವಿಡ್​ನಿಂದ ಬಹಳ ದಿನಗಳವರೆಗೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದು ಮತ್ತೆ ಚಿತ್ರೀಕರಣಗಳಲ್ಲಿ‌ ಭಾಗಿಯಾಗಿದ್ದರು. ವಿಕಾಸ್‌ ಬಾಹ್ಲ್‌ ಅವರ ಮುಂದಿನ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿರುವುದಾಗಿ ಮಾಹಿತಿ ನೀಡಿದ್ದರು.

ABOUT THE AUTHOR

...view details