ಅನಗತ್ಯ ಸಂದೇಶಗಳನ್ನು ನಿಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಬದಲು ನಿರ್ಗತಿಕರಿಗೆ ಸಹಾಯ ಮಾಡಿ ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿಮಾನಿಗಳ ಬಳಿ ಮನವಿ ಮಾಡಿದ್ದಾರೆ.
ಸಂದೇಶ ನೀಡುವ ಬದಲು ಸಹಾಯ ಮಾಡಿ;ನಟ ಅಕ್ಷಯ್ ಕುಮಾರ್ ಮನವಿ - undefined
ಅಸ್ಸಾಂ ಪ್ರವಾಹಪೀಡಿತರಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ 2 ಕೋಟಿ ರೂಪಾಯಿ ಹಣ ನೀಡಿದ್ದು ತಮ್ಮ ಕೈಲಾದ ಸಹಾಯ ಮಾಡಿ ಎಂದು ಅಭಿಮಾನಿಗಳ ಬಳಿ ಮನವಿ ಮಾಡಿದ್ದಾರೆ.
![ಸಂದೇಶ ನೀಡುವ ಬದಲು ಸಹಾಯ ಮಾಡಿ;ನಟ ಅಕ್ಷಯ್ ಕುಮಾರ್ ಮನವಿ](https://etvbharatimages.akamaized.net/etvbharat/prod-images/768-512-3903851-thumbnail-3x2-akshay.jpg)
ಅಸ್ಸಾಂನಲ್ಲಿ ಪ್ರವಾಹದಿಂದ ಬಹಳಷ್ಟು ಮಂದಿ ಸಾವನ್ನಪ್ಪಿದ್ದು ಎಷ್ಟೋ ಜನರು ನಿರಾಶ್ರಿತರಾಗಿದ್ದಾರೆ. ಈ ಸಂಬಂಧ ನಟ ಅಕ್ಷಯ್ ಕುಮಾರ್ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ಹಾಗೂ ಕಾಜಿರಂಗ ಪಾರ್ಕ್ ರಕ್ಷಣಾ ಕಾರ್ಯಾಚರಣೆಗೆ 1 ಕೋಟಿ ರೂಪಾಯಿ ಸೇರಿ ಒಟ್ಟು 2 ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ. ಅಲ್ಲದೆ ಜನರು ಈ ಘಟನೆ ಬಗ್ಗೆ ಕನಿಕರ ಪಟ್ಟು ಸೋಶಿಯಲ್ ಮೀಡಿಯಾದಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡುವ ಬದಲು ಸಹಾಯ ಮಾಡಲು ಮುಂದಾಗಿ ಎಂದು ಮನವಿ ಮಾಡಿದ್ದಾರೆ.
ಸದ್ಯಕ್ಕೆ ಅಕ್ಷಯ್ ಕುಮಾರ್ 'ಮಿಷನ್ ಮಂಗಳ್' ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಇದ್ದಾರೆ. ವಿದ್ಯಾಬಾಲನ್, ನಿತ್ಯಾ ಮೆನನ್, ಸೋನಾಕ್ಷಿ ಸಿನ್ಹಾ, ತಾಪ್ಸಿ ಪನ್ನು, ಹಿರಿಯ ನಟ ದತ್ತಣ್ಣ ಹಾಗೂ ಇನ್ನಿತರರು ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ.