ಕನ್ನಡ ಚಿತ್ರರಂಗ ಮಾತ್ರವಲ್ಲದೇ, ಭಾರತೀಯ ಸಿನಿರಂಗದಲ್ಲಿ ಟೈಟಲ್ನಿಂದಲೇ ಹವಾ ಸೃಷ್ಟಿಸಿರುವ ಚಿತ್ರ ಕಬ್ಜ. ನಿರ್ದೇಶಕ ಆರ್.ಚಂದ್ರ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದಾರೆ.
ಕಬ್ಜ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಕೆಜಿಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿಂದ ಮಿನರ್ವ ಮಿಲ್ನಲ್ಲಿ ಅದ್ಧೂರಿಯಾಗಿ ಸೆಟ್ ನಿರ್ಮಾಣ ಮಾಡಲಾಗಿತ್ತು. ಸೆಟ್ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಬಾಲಿವುಡ್ ನಟ ನವಾಬ್ ಶಾ ಕಾಂಬಿನೇಷನ್ನ ಚಿತ್ರೀಕರಣ ನಡೆಯುತ್ತಿದೆ. ಹಿಂದಿ, ತೆಲುಗು, ಸಿನಿಮಾಗಳಲ್ಲಿ ಖಳ ನಟನಾಗಿ ಮಿಂಚಿರುವ ನವಾಬ್ ಶಾ ಕಬ್ಜ ಚಿತ್ರದಲ್ಲಿ ಡಾನ್ ಪಾತ್ರ ಮಾಡುತ್ತಿದ್ದಾರೆ.
ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಆರ್.ಚಂದ್ರು, ಉಪೇಂದ್ರ ರೆಟ್ರೋ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ನವಾಬ್ ಶಾ ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ ಎಂದರು. ಅಲ್ಲದೇ, ಉಪೇಂದ್ರ ಅವರ ಸಪೋರ್ಟ್ನಿಂದಾಗಿ ದೊಡ್ಡ ಮಟ್ಟದಲ್ಲಿ ಈ ಸಿನಿಮಾ ಮಾಡೋದಕ್ಕೆ ಸಾಧ್ಯವಾಯಿತು ಎಂದರು.