ಹೈದರಾಬಾದ್ :ಕಳೆದ 10 ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಬಂದಿದೆ. ಈ ಬಗ್ಗೆ ಸ್ವತಃ ಕಂಗನಾ ಹೇಳಿಕೊಂಡಿದ್ದಾರೆ.
ಕೊರೊನಾದಿಂದ ಮುಕ್ತರಾದ ಬಾಲಿವುಡ್ ಬೆಡಗಿ ಕಂಗನಾ ರಣಾವತ್ ಹೇಳಿದ್ದಿಷ್ಟೇ.. - ಇನ್ಸ್ಟಾಗ್ರಾಂ ಮೂಲಕ ಮಾಹಿತಿ
ಈ ತಿಂಗಳ ಆರಂಭದಲ್ಲಿ ಪದೇಪದೆ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿತ್ತು. ಹೀಗಾಗಿ, ನೆಗೆಟಿವ್ ವರದಿ ಬಗ್ಗೆ ಇನ್ಸ್ಟಾಗ್ರಾಂ ಮೂಲಕ ಮಾಹಿತಿ ನೀಡಿದ್ದಾರೆ..
ಬಾಲಿವುಡ್ ಬೆಡಗಿ ಕಂಗನಾ ರಣಾವತ್
ಈ ಹಿಂದೆ ಮೇ 8 ರಂದು ಕಂಗನಾಗೆ ಕೊರೊನಾ ಸೋಂಕು ತಗುಲಿತ್ತು. ಬಳಿಕ ಹೋಂ ಕ್ವಾರಂಟೈನ್ನಲ್ಲಿದ್ದ ನಟಿ, ಈ ಸೋಂಕನ್ನು ಹೊಡೆದೋಡಿಸುವೆ ಎಂದಿದ್ದರು.
ಈ ತಿಂಗಳ ಆರಂಭದಲ್ಲಿ ಪದೇಪದೆ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿತ್ತು. ಹೀಗಾಗಿ, ನೆಗೆಟಿವ್ ವರದಿ ಬಗ್ಗೆ ಇನ್ಸ್ಟಾಗ್ರಾಂ ಮೂಲಕ ಮಾಹಿತಿ ನೀಡಿದ್ದಾರೆ.
Last Updated : May 18, 2021, 7:10 PM IST