ವಿಕ್ರಾಂತ್ ರೋಣ ಕನ್ನಡ ಚಿತ್ರರಂಗದ ಅಲ್ಲದೇ ಭಾರತೀಯ ಸಿನಿಮಾ ರಂಗದಲ್ಲಿ ಟಾಕ್ ಆಗುತ್ತಿರುವ ಚಿತ್ರ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಕ್ರಾಂತ್ ಆಗಿ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ. ಕೆಲವು ದಿನಗಳ ಹಿಂದೆ ಕಿಚ್ಚನ ಜೊತೆ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡೀಸ್ ವಿಶೇಷ ಹಾಡಿನಲ್ಲಿ ಹೆಜ್ಜೆ ಹಾಕಿದರು.
ವಿಕ್ರಾಂತ್ ಸುದೀಪ್ ಜೊತೆ ರಕ್ಕಮ್ಮನಾಗಿ ಮಿಂಚಲಿದ್ದಾರೆ ಬಾಲಿವುಡ್ ಬೆಡಗಿ ಸುದೀಪ್ ಜೊತೆ ಸ್ಟೈಲಿಷ್ ಅವತಾರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸೊಂಟ ಬಳಕಿಸಿದರು. ವಿಕ್ರಾಂತ್ ರೋಣ ಚಿತ್ರದಲ್ಲಿ ಸುದೀಪ್ ಮತ್ತು ಜಾಕ್ವೆಲಿನ್ ಕೆಮಿಸ್ಟ್ರಿಯ ಫೋಟೋಗಳು ಸಖತ್ ಸೌಂಡ್ ಮಾಡಿತ್ತು. ಇದೀಗ ವಿಕ್ರಾಂತ್ ರೋಣ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಪಾತ್ರದ ಫಸ್ಟ್ ಲುಕ್ ಅನಾವರಣ ಆಗಿದೆ.
ಕಿಚ್ಚನ ಜೊತೆ ಕಿಕ್ಕೇರಿಸುವ ಲುಕ್ನಲ್ಲಿ ರಕ್ಕಮ್ಮನಾಗಿ ಜಾಕ್ವೆಲಿನ್ ಫರ್ನಾಂಡಿಸ್ ಮಿಂಚಿರುವುದು ಈ ಫೋಸ್ಟರ್ನಲ್ಲಿ ಗೊತ್ತಾಗುತ್ತೆ. ಕಿಚ್ಚ ಸುದೀಪ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ನಟಿಸಿದ್ದಾರೆ. ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರಕ್ಕೆ ಅನೂಪ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ವಿಕ್ರಾಂತ್ ಸುದೀಪ್ ಜೊತೆ ರಕ್ಕಮ್ಮನಾಗಿ ಮಿಂಚಲಿದ್ದಾರೆ ಬಾಲಿವುಡ್ ಬೆಡಗಿ ಈ ಚಿತ್ರಕ್ಕೆ ವಿಲಿಯಮ್ ಡೇವಿಡ್ ಅವರ ಛಾಯಾಗ್ರಹಣವಿದೆ. ನಿರ್ಮಾಪಕ ಜಾಕ್ ಮಂಜು ಅದ್ದೂರಿ ಬಜೆಟ್ನಲ್ಲಿ ಈ ಸಿನಿಮಾವನ್ನ ನಿರ್ಮಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸ ನಡೆಯುತ್ತಿದ್ದು, ಸುದೀಪ್ ಅವರ ಡಬ್ಬಿಂಗ್ ಮುಗಿದಿದೆ.
14 ಭಾಷೆಗಳಲ್ಲಿ ತೆರೆಗೆ ಬರಲಿರುವ ವಿಕ್ರಾಂತ್ ರೋಣ ಫ್ರೆಂಚ್, ಅರೆಬಿಕ್, ಸ್ಪ್ಯಾನಿಷ್, ಮಂಡರಿನ್ ಮತ್ತು ರಷ್ಯಾ ಭಾಷೆಗಳಿಗೆ ಕೂಡ ಡಬ್ ಆಗಲಿದೆ.