ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಪುಷ್ಪ. ನಿನ್ನೆಯಷ್ಟೇ ಬೆಂಗಳೂರಲ್ಲಿ ಚಿತ್ರತಂಡ ಪ್ರಚಾರ ಕಾರ್ಯಕ್ರಮ ನಡೆಸಿ, ಸಿನಿಮಾ ನೋಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿತ್ತು. ಆದರೆ, ಸಿನಿಮಾದ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುಷ್ಪ ಸಿನಿಮಾ ನಾಳೆಯಿಂದ ವಿಶ್ವದಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗೋದಕ್ಕೆ ಸಜ್ಜಾಗಿದೆ. ಆದರೆ, ಪುಷ್ಪ ಸಿನಿಮಾದ ವಿತರಕ ಸ್ವಾಗತ್ ಅವರ ಎಡವಟ್ಟಿನಿಂದ ಕನ್ನಡಿಗರ ಕೋಪಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ #BoycottPushpainKarnataka ಹ್ಯಾಶ್ ಟ್ಯಾಗ್ ಕೊಟ್ಟು ಸಿನಿಮಾವನ್ನು ನಿಷೇಧ ಮಾಡುವಂತೆ ಕನ್ನಡಿಗರು ಅಭಿಯಾನ ಆರಂಭಿಸಿದ್ದಾರೆ.
ಪುಷ್ಪ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗಲಿದೆ. ಆದರೆ, ಕೇವಲ ಬೆರಳೆಣಿಕೆಯಷ್ಟು ಚಿತ್ರಮಂದಿರಗಳಲ್ಲಿ ಮಾತ್ರ ರಿಲೀಸ್ ಆಗುತ್ತಿದೆ. ಹೀಗಾಗಿ ಕನ್ನಡಿಗರು ಚಿತ್ರತಂಡ ಹಾಗೂ ಕರ್ನಾಟಕದಲ್ಲಿ ಈ ಚಿತ್ರವನ್ನು ವಿತರಣೆ ಮಾಡುತ್ತಿರುವ ವಿತರಕ ಸ್ವಾಗತ್ ವಿರುದ್ಧ ಕಿಡಿಕಾರುತ್ತಿದ್ದಾರೆ.