ಕರ್ನಾಟಕ

karnataka

By

Published : Feb 20, 2022, 8:16 AM IST

ETV Bharat / sitara

ಸಿಎಂ ಆಗಿ ಕನ್ನಡ ಚಿತ್ರರಂಗಕ್ಕೆ ಯಡಿಯೂರಪ್ಪ ಎಂಟ್ರಿ: ಯಾವ ಚಿತ್ರ, ಕಥೆ ಏನು?

ರಾಜಕಾರಣದಲ್ಲಿ ತಮ್ಮದೇ ರೀತಿಯ ಛಾಪು ಮೂಡಿಸಿರುವ ಬಿ.ಎಸ್.ಯಡಿಯೂರಪ್ಪ, ಇದೀಗ ತನುಜಾ ಸಿನಿಮಾದಲ್ಲಿ ಸಿಎಂ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

bs yeddyurappa
bs yeddyurappa

ರಾಜಕಾರಣಿಗಳು ಕನ್ನಡ ಸಿನಿಮಾಗಳಲ್ಲಿ ವಿಶೇಷ ಅತಿಥಿ ಪಾತ್ರಗಳಲ್ಲಿ ಅಭಿನಯಿಸೋದು ಹೊಸತೇನಲ್ಲ. ಆದ್ರೆ ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತನುಜಾ ಚಿತ್ರಕ್ಕೆ ಮೊಟ್ಟಮೊದಲ ಬಾರಿಗೆ ಬಣ್ಣ ಹಚ್ಚಿ ಸ್ಯಾಂಡಲ್​​ವುಡ್​ಗೆ ಪದಾರ್ಪಣೆ ಮಾಡಿದ್ದಾರೆ.

ಈ ಹಿಂದೆ ಬಿಎಸ್​ವೈ ಅವರೇ ಸಿಎಂ ಆಗಿದ್ದ ವೇಳೆ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆ ತೋಡಿಕೊಂಡಿದ್ದಳು. ಬಳಿಕ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಕಾರದಿಂದ ಪರೀಕ್ಷೆ ಬರೆದಿದ್ದಳು. ನಂತರ ನೀಟ್ ಪರೀಕ್ಷೆ ಪಾಸಾಗಿದ್ದು ಇಡೀ ದೇಶದ ಗಮನ ಸೆಳೆದಿತ್ತು.

ಸಿಎಂ ಪಾತ್ರದಲ್ಲಿ ಯಡಿಯೂರಪ್ಪ

ತನುಜಾ ಸುಮಾರು 350 ಕಿ.ಮೀ ದೂರದಿಂದ ಬಂದು ಪರೀಕ್ಷೆ ಬರೆದಿದ್ದು ಎಲ್ಲೆಡೆ ಸುದ್ದಿಯಾಗಿತ್ತು. ಇದನ್ನೇ ಒನ್ಲೈನ್ ಸ್ಟೋರಿ ಮಾಡಿಕೊಂಡು ಸಾಮಾಜಿಕ ಕಳಕಳಿಯುಳ್ಳ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ.ಹಳ್ಳಿ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.

ಇದೀಗ ಮಾಜಿ ಸಿಎಂ ಆಗಮನದಿಂದ ಚಿತ್ರತಂಡಕ್ಕೆ ದೊಡ್ಡ ಶಕ್ತಿ ಸಿಕ್ಕಂತಾಗಿದೆ. ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಈಗ ಸಿಎಂ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಶನಿವಾರ ಮೊದಲ ದಿನ ಅವರ ಭಾಗದ ಚಿತ್ರೀಕರಣ ಯಶಸ್ವಿಯಾಗಿ ನಡೆದಿದ್ದು, ಅದ್ಭುತವಾಗಿ ನಟಿಸಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಮಾಜಿ ಸಿಎಂ ಯಡಿಯೂರಪ್ಪನವರ ಜೊತೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್

ವಿಧಾನಸೌಧದ ಒಳಗೆ ಮತ್ತು ಹೊರಗೆ ಯಡಿಯೂರಪ್ಪನವರ ಹೋರಾಟದ ಹಾದಿ ಕಂಡಿರುವ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಿಗೆ ಚಿತ್ರದಲ್ಲಿ ಅವರು ಹೇಗೆ ಕಾಣಿಸುತ್ತಾರೆ? ಅವರ ಪಾತ್ರ ಹೇಗಿರಲಿದೆ? ಎನ್ನುವ ಸಹಜ ಕುತೂಹಲವಿದೆ.

Beyond visions cinemas ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ "ತನುಜಾ" ಚಿತ್ರ ನೈಜ ಘಟನೆಯಾಧಾರಿತವಾಗಿದೆ. ಶಿವಮೊಗ್ಗದ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ.

ಶೂಟಿಂಗ್‌ನಲ್ಲಿ ಭಾಗಿಯಾದ ಯಡಿಯೂರಪ್ಪ
ಸರ್ಕಾರಿ ಹಿ.ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ‌ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ತಾರಾಗಣದಲ್ಲಿ ಬಿ.ಎಸ್.ಯಡಿಯೂರಪ್ಪ, ವಿಶ್ವೇಶ್ವರ ಭಟ್, ಡಾ.ಕೆ. ಸುಧಾಕರ್, ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ, ಬೇಬಿ ಶ್ರೀ ಅಭಿನಯಿಸುತ್ತಿದ್ದಾರೆ.
ಪ್ರದ್ಯೋತನ ಸಂಗೀತ ನಿರ್ದೇಶನ ಹಾಗೂ ರವೀಂದ್ರನಾಥ್ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ.ಸಂಕಲನವಿದ್ದು, ಆರ್.ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ.ಪ್ರಹ್ಲಾದ್ ಸಂಭಾಷಣೆ ಬರೆದಿದ್ದಾರೆ.

ABOUT THE AUTHOR

...view details