ಕರ್ನಾಟಕ

karnataka

ETV Bharat / sitara

ಕನ್ನಡ ನಟ ಚಂದನ್​ ತೆಲುಗು ಕಿರುತೆರೆಗೆ ಪಾದಾರ್ಪಣೆ - 'ಸಾವಿತ್ರಮ್ಮಗಾರಿ ಅಬ್ಬಾಯಿ' ಧಾರಾವಾಹಿ

ಕಿರುತೆರೆ ನಟ ಚಂದನ್ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸರ್ವ ಮಂಗಳ ಮಾಂಗಲ್ಯೆ' ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ತೆಲುಗಿನ ಸ್ಟಾರ್ ಮಾ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸಾವಿತ್ರಮ್ಮಗಾರಿ ಅಬ್ಬಾಯಿ' ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿ ಮಿಂಚುತ್ತಿದ್ದಾರೆ.

ಕನ್ನಡ ಕಿರುತೆರೆಯ ನಟ ಚಂದನ್ ತೆಲುಗು ಕಿರುತೆರೆಗೆ ಪಾದಾರ್ಪಣೆ

By

Published : Nov 25, 2019, 4:03 PM IST

ಲಕ್ಷ್ಮಿ ಬಾರಮ್ಮ ಧಾರಾವಾಹಿ ನಂತರ ಕನ್ನಡ ಸಿನಿಮಾಗೆ ಲಗ್ಗೆ ಇಟ್ಟಿದ್ದ ಚಂದನ್ ಮತ್ತೆ ಕಿರುತೆರೆಗೆ ಕಾಲಿಟ್ಟಿದ್ದಾರೆ.‌ ಸಿನಿಮಾಗಳಲ್ಲಿ ಹೇಳಿಕೊಳ್ಳುವಂತಹ ಪಾತ್ರ ಹಾಗೂ ಉತ್ತಮ ಕಥೆಗಳು ಸಿಗದಿದ್ದರಿಂದ ಇವರಿಗೆ ದೊಡ್ಡ ಬ್ರೇಕ್ ಸಿಗಲಿಲ್ಲ. ಹೀಗಾಗಿ ತಮ್ಮ ಧಾರಾವಾಹಿ ಮನೆಗೆ ಮತ್ತೆ ಮರಳಿದ್ದಾರೆ.‌

ಸದ್ಯ ಚಂದನ್ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸರ್ವ ಮಂಗಳ ಮಾಂಗಲ್ಯೆ' ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ತೆಲುಗಿನ ಸ್ಟಾರ್ ಮಾ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸಾವಿತ್ರಮ್ಮಗಾರಿ ಅಬ್ಬಾಯಿ' ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿ ಮಿಂಚುತ್ತಿದ್ದಾರೆ.

ಕನ್ನಡ ನಟ ಚಂದನ್ ತೆಲುಗು ಕಿರುತೆರೆಗೆ ಪಾದಾರ್ಪಣೆ

ಕಾಕತಾಳೀಯ ಅಂದ್ರೆ 'ಸಾವಿತ್ರಮ್ಮಗಾರಿ ಅಬ್ಬಾಯಿ' ಸೀರಿಯಲ್​​ನಲ್ಲೂ ಎರಡನೇ ಮದುವೆ ಇದೆ ಎಂದು ಚಂದನ್ ತಮ್ಮ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಚಂದನ್​​ ಕನ್ನಡ ಮತ್ತು ತೆಲುಗಿನ ಸೀರಿಯಲ್​​ಗಳಲ್ಲಿ ಬ್ಯುಸಿಯಾಗಿದ್ದಾರೆ.‌

ಈ ಹಿಂದೆ 'ರಾಧಾ ಕಲ್ಯಾಣ' ಮತ್ತು 'ಲಕ್ಷ್ಮಿ ಬಾರಮ್ಮ' ಇವರಿಗೆ ಹೆಸರು ತಂದುಕೊಟ್ಡಿದ್ದವು. ಇನ್ನು ಧಾರಾವಾಹಿಯಲ್ಲಿ ನಟಿಸುತ್ತಿರುವಾಗಲೇ ಚಂದನ್​​ಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತು. 'ಪರಿಣಯ', 'ಎರಡೊಂದ್ಲ ಮೂರು', 'ಲವ್ ಯೂ ಆಲಿಯಾ', 'ಪ್ರೇಮ ಬರಹ' ಮುಂತಾದ ಸಿನಿಮಾಗಳಲ್ಲಿ ಚಂದನ್ ನಟಿಸಿದ್ದಾರೆ.

ಕನ್ನಡ ನಟ ಚಂದನ್ ತೆಲುಗು ಕಿರುತೆರೆಗೆ ಪಾದಾರ್ಪಣೆ

ABOUT THE AUTHOR

...view details