ನಂದಕಿಶೋರ್ ನಿರ್ದೇಶನದಲ್ಲಿ ಶ್ರೇಯಸ್ ಮಂಜು ಅಭಿನಯಿಸುತ್ತಿರುವ ಹೊಸ ಚಿತ್ರ ಇತ್ತೀಚೆಗೆ ಸದ್ದಿಲ್ಲದೆ ಸೆಟ್ಟೇರಿದೆ. ಈ ಚಿತ್ರಕ್ಕೆ ಮೊದಲಿಗೆ ಧರ್ಮವಿಶ್ ಸಂಗೀತ ಸಂಯೋಜಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಚಿತ್ರದ ಜಾಹೀರಾತಿನಲ್ಲೂ ಅವರ ಹೆಸರಿತ್ತು. ಆದರೆ, ಇದೀಗ ಧರ್ಮವಿಶ್ ಬದಲಾಗಿದ್ದಾರೆ. ಅವರ ಬದಲು ಚಂದನ್ ಶೆಟ್ಟಿ ಸಂಗೀತ ನಿರ್ದೇಶಕರಾಗಿ ಚಿತ್ರತಂಡ ಸೇರಿಕೊಂಡಿದ್ದಾರೆ.
ನಂದಕಿಶೋರ್ ನಿರ್ದೇಶನದಲ್ಲಿ ಚಂದನ್ ಕೆಲಸ ಮಾಡುತ್ತಿರುವುದು ಇದು ಎರಡನೆಯ ಬಾರಿ. ಇದಕ್ಕೂ ಮುನ್ನ, ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಧ್ರುವ ಸರ್ಜಾ ಅಭಿನಯದ 'ಪೊಗರು' ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಿದ್ದರು. ಚಿತ್ರದ `ಖರಾಬು' ಮತ್ತು `ಪೊಗರು' ಹಾಡುಗಳು ಸೂಪರ್ ಹಿಟ್ ಆಗಿದ್ದವು. ಹಾಡುಗಳ ಯಶಸ್ವಿಯಾದ ಹಿನ್ನೆಲೆಯಲ್ಲಿ, 'ದುಬಾರಿ' ಚಿತ್ರಕ್ಕೂ ಇದೇ ಕಾಂಬಿನೇಷನ್ ಮುಂದುವರೆದಿದೆ.