ಕರ್ನಾಟಕ

karnataka

ETV Bharat / sitara

ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ‘ರೌಡಿ ಬೇಬಿ’ ಹಾಡು - ಚಂದನ್ ಶೆಟ್ಟಿ

ಕನ್ನಡದ ನಂ ಒನ್ ರ‍್ಯಾಪ್‌ ಸಾಂಗ್‌ ಹಾಡುಗಾರ ಚಂದನ್ ಶೆಟ್ಟಿ ‘ರೌಡಿ ಬೇಬಿ’ ಚಿತ್ರಕ್ಕೆ  ಧ್ವನಿಗೂಡಿಸಿದ್ದಾರೆ.

Chandan Shetty
ಚಂದನ್ ಶೆಟ್ಟಿ

By

Published : Dec 4, 2019, 10:12 AM IST

ಬೆಂಗಳೂರು: ಕನ್ನಡದ ನಂ ಒನ್ ರ‍್ಯಾಪರ್​ ಚಂದನ್ ಶೆಟ್ಟಿ ‘ರೌಡಿ ಬೇಬಿ’ ಚಿತ್ರಕ್ಕೆ ಧ್ವನಿಗೂಡಿಸಿದ್ದಾರೆ.

ಸುಮುಖ ಎಂಟರ್ ಟೈನರ್ಸ್ ಹಾಗೂ ವಾರ್ ಫುಟ್ ಸ್ಟುಡಿಯೋಸ್ ಲಾಂಛನದಲ್ಲಿ ಎಸ್.ಎಸ್. ರವಿಗೌಡ ಹಾಗೂ ಶ್ಯಾಮಲಾ ರೆಡ್ಡಿ ಅವರು ನಿರ್ಮಿಸುತ್ತಿರುವ ‘ರೌಡಿ ಬೇಬಿ` ಚಿತ್ರಕ್ಕಾಗಿ ಡಾ. ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ ‘ಸಾಗು ಮುಂದೆ ಸಾಗು ಈ ಭೂಮಿ ದೊಡ್ಡದು’ ಹಾಡನ್ನು ಚಂದನ್ ಶೆಟ್ಟಿ ಹಾಡಿದ್ದಾರೆ. ರೆಡ್ಡಿ ಕೃಷ್ಣ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಹಿಂದೆ ‘ಪ್ರಯಾಣಿಕರ ಗಮನಕ್ಕೆ’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ರೆಡ್ಡಿ ಕೃಷ್ಣ ಅವರು ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಮಂಗಳೂರು, ಕೇರಳ, ಬೆಂಗಳೂರು ಮುಂತಾದ ಕಡೆ ಮೂವತ್ತು ದಿನಗಳ ಚಿತ್ರೀಕರಣ ನಡೆದಿದೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಡಾ. ವಿ.ನಾಗೇಂದ್ರ ಪ್ರಸಾದ್, ಸಿಂಪಲ್ ಸುನಿ, ಚೇತನ್ ಕುಮಾರ್ ಕಿನಾಲ್ ರಾಜ್ ಬರೆದಿದ್ದಾರೆ. ಸಾಮ್ರಾಟ್ ಛಾಯಾಗ್ರಹಣ, ಪ್ರಮೋದ್ ಸೋಮರಾಜ್ ಸಂಕಲನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಎರಡು ಸಾಹಸ ಸನ್ನಿವೇಶಗಳಿದ್ದು, ಚೇತನ್ ಕುಮಾರ್ ಸಂಭಾಷಣೆ ಬರೆದಿದ್ದಾರೆ. ನಿರ್ಮಾಪಕ ರವಿಗೌಡ ಅವರು ಈ ಚಿತ್ರದ ನಾಯಕರಾಗಿ ನಟಿಸಿದ್ದು, ಹೀರಕೌರ್, ದಿವ್ಯರಾವ್, ಅರುಣ ಬಾಲರಾಜ್, ಅಮಿತ್, ಕೆಂಪೇಗೌಡ, ಶ್ರೀನಾಥ್ ವಸಿಷ್ಠ ಇತರರು ತಾರಗಣದಲ್ಲಿದ್ದಾರೆ.

ABOUT THE AUTHOR

...view details