ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಕ್ಲಬ್ವೊಂದರಲ್ಲಿ ಅಂದರ್ ಬಾಹರ್ ಆಡಿಸುತ್ತಿದ್ದ ಆರೋಪದ ಮೇರೆಗೆ ಉದ್ಯಮಿ ಹಾಗೂ ನಟಿಯ ತಂದೆ ಹರಿರಾಜ್ ಶೆಟ್ಟಿ ಸೇರಿದಂತೆ 42 ಮಂದಿ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ನಟ ಗಣೇಶ್ ಅಭಿನಯದ ಮುಂಗಾರು ಮಳೆ- 2 ಚಿತ್ರದಲ್ಲಿ ನಟಿಸಿದ್ದ ನಟಿ ನೇಹಾ ಶೆಟ್ಟಿಯ ತಂದೆ ಹರಿರಾಜ್ ರಾಜ್ ಶೆಟ್ಟಿ ಹಾಗೂ ಆತನ ಗ್ಯಾಂಬ್ಲಿಂಗ್ ಗ್ಯಾಂಗ್ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 250 ಪುಟಗಳಿರುವ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ನಗರದಲ್ಲಿ ಜೂಜು ಅಡ್ಡೆ ನಿರ್ಮಿಸಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಇದೇ ವರ್ಷ ಮಾ.13 ರಂದು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಪೂಲ್ ಎನ್, ರಿ ಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಬ್ಯಾನ್ ಸ್ಕಿಲ್ ಗೇಮ್, ವಿಡಿಯೋ ಗೇಮ್ ಪಾರ್ಲರ್ ನಡೆಸುತ್ತಿದ್ದ ಈತನೊಂದಿಗೆ ಐವರು ಮಹಿಳೆಯರು ಸೇರಿದಂತೆ 42 ಮಂದಿ ಜೂಜಿನಲ್ಲಿ ತೊಡಗಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ 1 ಲಕ್ಷಕ್ಕಿಂತ ಹೆಚ್ಚು ಹಣ ಜಪ್ತಿ ಮಾಡಿಕೊಂಡಿದ್ದರು.