ಮದಗಜ (Madagaja) ಸಿನಿಮಾ ಟ್ರೇಲರ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ. ಇಂದು ಬಿಡುಗಡೆಯಾದ ಮದಗಜ ಟ್ರೇಲರ್ (Madagaja Trailer) ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮದಗಜ ಟ್ರೇಲರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶ್ರೀಮುರಳಿಗೆ ಆಲ್ ದಿ ಬೆಸ್ಟ್ ಹೇಳಿದರು. ಟ್ರೇಲರ್ ಇಷ್ಟು ಅದ್ಭುತವಾಗಿದೆ ಅಂದ್ರೆ ಸಿನಿಮಾನೂ ಚೆನ್ನಾಗಿರುತ್ತೆ. ಶ್ರೀಮುರಳಿ ಹಾಲಿವುಡ್ ಹೀರೋ ಆಗಿದ್ದಾರೆ. ಒಬ್ಬ ವ್ಯಕ್ತಿಗೆ ವಯಸ್ಸು ಮುಖ್ಯವಲ್ಲ, ಸಾಧನೆ ಮುಖ್ಯ ಎಂದು ಹೇಳಿದರು.