ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ನಿರ್ಮಿಸುವುದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್ನಾರಾಯಣ ಹೇಳಿದ್ದಾರೆ.
ಭಾರತೀಯ ವಿದ್ಯಾಭವನದಲ್ಲಿ ಡಾ.ಬಿ. ಸರೋಜದೇವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಎಷ್ಟೋ ಸರ್ಕಾರಗಳು ಫಿಲ್ಮ್ ಸಿಟಿ ನಿರ್ಮಿಸುತ್ತೇವೆ ಎಂದು ಹೇಳಿವೆ. ಆದರೆ, ಅದು ಇದುವರೆಗೂ ಕಾರ್ಯ ಸಾಧ್ಯವಾಗಿಲ್ಲ. ನಮ್ಮ ಸರ್ಕಾರ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಬದ್ಧವಾಗಿರಲಿದೆ. ಆದರೆ, ಅದನ್ನು ಬೆಂಗಳೂರಿನಲ್ಲಿ ನಿರ್ಮಿಸಲಿದೆ ಎಂದರು.
ಡಾ.ಬಿ. ಸರೋಜದೇವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸುಮಲತಾ, ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್ನಾರಾಯಣ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ದಿನವೇ ಈ ಜವಾಬ್ದಾರಿ ನನಗೆ ವಹಿಸಿದ್ದಾರೆ. ಅಲ್ಲದೆ, ಇದಕ್ಕಾಗಿ ಬೆಂಗಳೂರಿನಲ್ಲಿ ಜಾಗ ಕೂಡ ಗುರುತಿಸಿದ್ದೆವು. ಆದರೆ, ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ. ಆದಷ್ಟು ಬೇಗ ಪೂರಕವಾದ ಸ್ಥಳವನ್ನು ಗುರುತಿಸಿ ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ಚಿತ್ರರಂಗದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತದೆ. ಅಲ್ಲದೆ, ಈಗಾಗಲೇ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪಿಸುವುದಕ್ಕೆ ಅಂತಾರಾಷ್ಟ್ರೀಯ ಮಟ್ಟದ ದೊಡ್ಡ ದೊಡ್ಡ ಸಂಸ್ಥೆಗಳೂ ಹೆಜ್ಜೆ ಇಟ್ಟಿವೆ. ಅವರಿಗೆ ಸ್ಥಳವನ್ನು ನಿಗದಿಪಡಿಸುವುದಷ್ಟೇ ಬಾಕಿ. ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.